More

    ಶೀಘ್ರದಲ್ಲೇ ಹೆಚ್ಚುವರಿ ಆಕ್ಸಿಜನ್

    
    ಬೆಳಗಾವಿ: ರಾಜ್ಯಕ್ಕೆ ಅಗತ್ಯವಿರುವ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ತಲೆದೋರಿರುವ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
    
    ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಗೆ ಸಂಬಂಧಿಸಿದಂತೆ ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಬಳ್ಳಾರಿಯಿಂದ ಮಹಾರಾಷ್ಟ್ರಕ್ಕೆ ಹಂಚಿಕೆಯಾಗಿದ್ದ ಆಕ್ಸಿಜನ್ ಪ್ರಮಾಣವನ್ನು ಕರ್ನಾಟಕಕ್ಕೆ ಮರು ಹಂಚಿಕೆ ಆಗಿರುವುದರಿಂದ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದಿಂದ ಬೆಳಗಾವಿ ಜಿಲ್ಲೆಗೆ ಪೂರೈಕೆಯಾಗುತ್ತಿದ್ದ 20 ಕೆಎಲ್ ಆಕ್ಸಿಜನ್ ಪೂರೈಕೆಗೆ ನಿರ್ಬಂಧ ವಿಧಿಸಿರುವ ಬಗ್ಗೆ ಮಹಾರಾಷ್ಟ್ರ ಸರ್ಕಾರದ ಜತೆ ಚರ್ಚೆ ನಡೆಸಿ ಮರು ಪೂರೈಕೆಗೆ ಕ್ರಮ ವಹಿಸಲಾಗುವುದು ಎಂದರು.
    
    ಕೇಂದ್ರ ಸರ್ಕಾರ ಟ್ಯಾಂಕರ್ ನೀಡಲಿದ್ದು, ಅದರಲ್ಲಿ ಬೆಳಗಾವಿ ಜಿಲ್ಲೆಗೆ ಒಂದು ಟ್ಯಾಂಕರ್ ಮೀಸಲಿಡಲಾಗುವುದು. ಹೋಮ್  ಐಸೋಲೇಷನ್ ಇರುವವರಿಗೆ ಸರಿಯಾಗಿ ಔಷಧ ಕಿಟ್ ನೀಡಬೇಕು. ಜತೆಗೆ ಸೋಂಕಿತರು ಯಾವ ರೀತಿಯಲ್ಲಿ ಮನೆಯಲ್ಲಿಯೇ ಆರೈಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಆರೋಗ್ಯ ಇಲಾಖೆ ತಂಡಗಳು ತಿಳಿವಳಿಕೆ ನೀಡಬೇಕು ಎಂದು ಸೂಚಿಸಿದರು. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts