More

    ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ

    ಕೊಕಟನೂರ: ಅಥಣಿ ತಾಲೂಕಿನ ಪ್ರವಾಹ ಪೀಡಿತ ಹಾಗೂ ಕೃಷ್ಣಾ ನದಿ ದಡದಲ್ಲಿರುವ ಹಲ್ಯಾಳ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದೆ.

    ಘಟಕ ದುರಸ್ತಿಗೆ ಬಂದು ಆರು ತಿಂಗಳು ಗತಿಸಿದರೂ ಸಂಬಂಧಪಟ್ಟ ಆಡಳಿತ ಮಂಡಳಿ ದುರಸ್ತಿಗೆ ಮುಂದಾಗುತ್ತಿಲ್ಲ. ಇದರಿಂದ ಸ್ಥಳೀಯರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಗ್ರಾಮವು 5 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಗಾಗಿ ಈ ಘಟಕವನ್ನೇ ಆಶ್ರಯಿಸಿದ್ದಾರೆ. ಆದರೆ, ಘಟಕ ಬಂದ್ ಆಗಿದ್ದರಿಂದ 2 ಕಿ.ಮೀ. ದೂರದಲ್ಲಿರುವ ಶಿವಲಿಂಗೇಶ್ವರ ನಗರದಲ್ಲಿನ ಘಟಕದಿಂದ ಶುದ್ಧ ನೀರು ತಂದು ಕುಡಿಯುತ್ತಿದ್ದಾರೆ. ಘಟಕ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂಬುದು ಸಾರ್ವಜನಿಕರ ಆಗ್ರಹ.

    ಘಟಕದ ದುರಸ್ತಿಗೆ ಅನುದಾನದ ಕೊರತೆ ಉಂಟಾಗಿದೆ. 14ನೇ ಹಣಕಾಸಿನ ಯೋಜನೆಯಡಿ ಘಟಕ ದುರಸ್ತಿಗೆ ಪ್ರಸ್ತಾವನೆ ಕಳಿಸುವಂತೆ ಪಿಡಿಒಗೆ ಸೂಚಿಸಲಾಗುವುದು. ಅನುದಾನ ಬಂದ ತಕ್ಷಣ ಘಟಕ ದುರಸ್ತಿ ಮಾಡಲಾಗುವುದು.
    | ರವಿ ಬಂಗಾರೆಪ್ಪನವರ ತಾಪಂ ಇಒಅಥಣಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts