More

    ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಒತ್ತು ಕೊಡಿ


    ಯಾದಗಿರಿ: ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಎಸ್ಸೆಸ್ಸೆಲ್ಸಿ ಲಿತಾಂಶ ಹೆಚ್ಚಳಕ್ಕೆ ವಿಶೇಷ ಕಾಳಜಿ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಕರೆ ನೀಡಿದರು.

    ನಗರದ ಡಿಡಿಪಿಐ ಕಚೇರಿ ಆವರಣದಲ್ಲಿ ನೂತನವಾಗಿ ನೇಮಕಗೊಂಡ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿ, ಹಲವು ವರ್ಷಗಳಿಂದ ಈ ಭಾಗದಲ್ಲಿ ಇದ್ದ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದಲ್ಲಿ ದಾವೆ ಇದ್ದಿದ್ದರಿಂದ ಶಿಕ್ಷಕರ ನೇಮಕಾತಿಯಾಗದೆ ತೊಂದರೆ ಅನುಭವಿಸುತ್ತಿದ್ದ ಶಿಕ್ಷಕರಿಗೆ ಸರಕಾರ ಸ್ಪಂದಿಸಿ ನೇಮಕಾತಿ ಆದೇಶ ಹೊರಡಿಸುವ ಮೂಲಕ ನೆರವಾಗಿದೆ ಎಂದರು.

    ಜಿಲ್ಲೆಯಲ್ಲಿ ಈಗಾಗಲೇ ಕೆಕೆಆರ್ಡಿಬಿಯಿಂದ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಶೇ.99 ರಷ್ಟು ಶಿಕ್ಷಕರನ್ನು ಒದಗಿಸುವ ಕಾರ್ಯ ಮಾಡಲಾಗುತ್ತಿದೆ. ಹಲವಾರು ವರ್ಷಗಳಿಂದ ಇದ್ದ ಶಿಕ್ಷಕರ ಕೊರತೆಯ ಕೂಗನ್ನು ಹೋಗಲಾಡಿಸಲು ಈ ಭಾಗದ ಜನ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಪ್ರಯತ್ನದ ಲವಾಗಿ ಹೆಚ್ಚಿನ ಶಿಕ್ಷಕರ ನೇಮಕಾತಿಯಾಗಿದೆ. ರಾಜ್ಯ ಸರಕಾರದಿಂದ ಈ ಭಾಗದ ಶೈಕ್ಷಣಿಕ ಉನ್ನತೀಕರಣಕ್ಕೆ 6ರಿಂದ 8ನೇ ತರಗತಿಯ 885 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಪೈಕಿ ಜಿಲ್ಲೆಯ 622 ಅಭ್ಯಥರ್ಿಗಳಲ್ಲಿ ಕೌನ್ಸಲಿಂಗ್ ಮೂಲಕ ನೇಮಕಾತಿಗೆ ಆದೇಶ ನೀಡಲಾಗುತ್ತಿದೆ. ಇಂದು ಗಣಿತ ಮತ್ತು ವಿಜ್ಞಾನ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಇನ್ನೂಳಿದ ಹುದ್ದೆಗಳು ನ್ಯಾಯಾಲಯದ ಆದೇಶದ ಆಧಾರದಮೇಲೆ ಕ್ರಮ ಆಗಲಿದೆ ಎಂದು ಹೇಳಿದರು.

    ರಾಜ್ಯದಲ್ಲಿ ನೂತನ ಸರಕಾರ ಬಂದ ತಕ್ಷಣ ಶೈಕ್ಷಣಿಕ ಹಾಗೂ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಂಡಿದೆ. ಈ ಭಾಗದ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಕೆಕೆಆರ್ ಡಿಬಿಯಿಂದಲೂ ಶೇ.25 ರಷ್ಟು ಅನುದಾನ ನೀಡಲಾಗುತ್ತಿದೆ. ಅಕ್ಷರ ಅವಿಷ್ಕಾರ ಕಾರ್ಯಕ್ರಮದಡಿ ಈ ಭಾಗದ ಶಾಲೆಗಳ ಕೊರತೆ ನೀಗಿಸಲು ವಿಶೇಷ ಗಮನ ನೀಡಲಾಗುತ್ತಿದೆ. ಅದರಂತೆ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಒಟ್ಟು 750 ಕೋಟಿ ರೂಗಳ ಅನುದಾನ ಕಾಯ್ದಿರಿಸುವ ಕುರಿತಂತೆ ಮುಂದಿನ 15 ದಿನಗಳಲ್ಲಿ ಕ್ರಿಯಾ ಯೋಜನೆಗೆ ಮಂಜೂರಾತಿ ಸಹ ದೊರೆಯಲಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts