More

    ಶೋಷಿತ ವರ್ಗದ ಧ್ವನಿ ಅಂಬೇಡ್ಕರ್

    ಸರಗೂರು: ಜಗತ್ತಿನಲ್ಲಿಯೇ ಬೃಹತ್ ಮತ್ತು ಶ್ರೇಷ್ಠ ಸಂವಿಧಾನ ರಚಿಸಿರುವ ಅಂಬೇಡ್ಕರ್ ಅವರು ದೇಶದ ಶಕ್ತಿ ಎಂದು ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.
    ತಾಲೂಕಿನ ಸಾಗರೆ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಶಕ್ತಿಶಾಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಲು ಅಂಬೇಡ್ಕರ ಅವರ ಪರಿಶ್ರಮ ಕಾರಣ. ಇಡೀ ವಿಶ್ವವೇ ಬೆರಗಾಗುವಂತಹ ಸಂವಿಧಾನವನ್ನು ದೇಶಕ್ಕೆ ನೀಡಿದರು. ಅವರ ಪರಿಕಲ್ಪನೆಯಿಂದಾಗಿ ನಾವಿಂದು ಅಧಿಕಾರ ಅನುಭವಿಸುತ್ತಿದ್ದೇವೆ. ಶೋಷಿತ ವರ್ಗದವರ ಧ್ವನಿಯಾಗಿದ್ದ ಅಂಬೇಡ್ಕರ್ ಅವರು ಭಾರತದ ಅಮೂಲ್ಯ ಆಸ್ತಿ ಎಂದು ಬಣ್ಣಿಸಿದರು.
    ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿಶ್ರಮದಿಂದ ವಿಶ್ವಕ್ಕೆ ಮಾದರಿಯಾದ ಬೃಹತ್ ಲಿಖಿತ ಸಂವಿಧಾನ ರಚಿಸಿದರು. ಇದರಿಂದ ಎಲ್ಲ ಸಮುದಾಯಗಳಿಗೆ ಶಿಕ್ಷಣ, ಸಮಾನತೆ ಲಭಿಸಿದೆ. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ನಿರಂತರವಾಗಿ 50 ಸಾವಿರಕ್ಕೂ ಹೆಚ್ಚು ಪುಸ್ತಕ ಓದಿದ್ದ ಅವರ ಜ್ಞಾನವನ್ನು ಸ್ಮರಿಸಬೇಕು ಎಂದು ಹೇಳಿದರು.
    ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಅಂಬೇಡ್ಕರ ಹೇಳಿದಂತೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ಸಾಗರೆ ಗ್ರಾಮದ ಅಭಿವೃದ್ಧಿಗೆ ಸರ್ಕಾರದಿಂದ ವಿವಿಧ ಯೋಜನೆಯಡಿ 10.50 ಲಕ್ಷ ರೂ. ಅನುದಾನ ನೀಡಿದ್ದು, ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
    ಬಿಜೆಪಿ ಮುಖಂಡ ಎಂ ಅಪ್ಪಣ್ಣ, ಜೆಡಿಎಸ್ ಮುಖಂಡ ಜಯಪ್ರಕಾಶ್ ಮಾತನಾಡಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಾತೆ ಗೌತಮಿ ಭಂತೇಜಿ ಸಾನ್ನಿಧ್ಯ ವಹಿಸಿದ್ದರು. ಸಮಾಜ ಸೇವಕರಾದ ಕೃಷ್ಣಸ್ವಾಮಿ, ದೇವದತ್ತ, ಶಂಕರೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೆಂಕಟಸ್ವಾಮಿ, ಚಿಕ್ಕವೀರನಾಯಕ, ಪುರಸಭೆ ಸದಸ್ಯ ಎಚ್.ಸಿ. ನರಸಿಂಹಮೂರ್ತಿ, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ತಾಪಂ ಮಾಜಿ ಅಧ್ಯಕ್ಷ ಗಿರೀಶ್, ಗ್ರಾಪಂ ಅಧ್ಯಕ್ಷ ಮೃತ್ಯುಂಜಯ, ಉಪಾಧ್ಯಕ್ಷೆ ರೂಪಾ, ಗ್ರಾಪಂ ಸದಸ್ಯರಾದ ಎಸ್.ಟಿ. ಸೋಮಣ್ಣ, ಮಹದೇವನಾಯಕ, ನಂಜಯ್ಯ, ಚನ್ನಿಪುರಮಲ್ಲೇಶ್, ಮುಖಂಡರಾದ ಕಂದೇಗಾಲ ಶಿವರಾಜು, ಗೋಪಾಲಸ್ವಾಮಿ, ಹೆಗ್ಗನೂರು ನಿಂಗರಾಜು,ಇಟ್ನ ರಾಜಣ್ಣ, ಹೂವಿನಕೊಳ ಮಹೇಂದ್ರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts