More

    ಶ್ರದ್ಧಾ ಭಕ್ತಿಯಿಂದ ಬಸವಣ್ಣನ ಸ್ಮರಣೆ


    ಕಲಬುರಗಿ: ಜಗಜ್ಯೋತಿ ಬಸವೇಶ್ವರ ಜಯಂತಿ ಉತ್ಸವವನ್ನು ಶ್ರದ್ಧಾ ಭಕ್ತಿಯೊಂದಿಗೆ ನಗರ ಸೇರಿ ಜಿಲ್ಲಾದ್ಯಂತ ಭಾನುವಾರ ಆಚರಿಸಲಾಯಿತು. ಕರೊನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಬಸವಣ್ಣನನ್ನು ಸ್ಮರಿಸಲಾಯಿತು. ಬಹುತೇಕರು ತಮ್ಮ ಮನೆಗಳಲ್ಲಿಯೇ ಬಸವ ಸ್ಮರಣೆ ಮಾಡಿದರು.
    ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಶರತ್ ಬಿ. ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಪೊಲೀಸ್ ಕಮೀಷನರ್ ಸತೀಶಕುಮಾರ, ಸಿಇಒ ಡಾ.ರಾಜಾ. ಪಿ ಇತರರಿದ್ದರು. ಸಂಸದ ಡಾ.ಉಮೇಶ ಜಾಧವ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್.ಸತೀಶಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪಿ.ರಾಜಾ, ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಗೋಪಾಲಕೃಷ್ಣ ಬಿ. ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಎಚ್ಕೆಇ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ, ಅಡಳಿತ ಮಂಡಳಿ ಸದಸ್ಯ ಡಾ.ಎಸ್.ಬಿ.ಕಾಮರಡ್ಡಿ, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಶಾಸಕರಾದ ಡಾ.ಅಜಯಸಿಂಗ್, ಬಿ.ಜಿ.ಪಾಟೀಲ್, ದತ್ತಾತ್ರೇಯ ಪಾಟೀಲ್, ಬಸವರಾಜ ಮತ್ತಿಮೂಡ, ತಿಪ್ಪಣ್ಣಪ್ಪ ಕಮಕನೂರ, ಯುವ ಉದ್ಯಮಿ ಚಂದ್ರಕಾಂತ ಪಾಟೀಲ್, ಬಸವೇಶ್ವರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಚಂದ್ರಶೇಖರ ತಳ್ಳಳ್ಳಿ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶರಣಕುಮಾರ ಮೋದಿ, ಜಿಲ್ಲಾ ವೀರಶೈವ ಸಮಾಜ ಅಧ್ಯಕ್ಷ ಅರುಣಕುಮಾರ ಪಾಟೀಲ್, ಉಪಾಧಕ್ಷರಾದ ಸುಭಾಷ ಬಿಜಾಪುರೆ, ಚಂದ್ರಶೇಖರ ತಳ್ಳಳ್ಳಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಘೂಳಿ, ಸುರೇಶ ಪಾಟೀಲ್ ಜೋಗೂರ, ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ್, ರಾಜ್ಯ ಸಂಚಾಲಕ ರವೀಂದ್ರ ಶಾಬಾದಿ, ಮಾಜಿ ಮೇಯರ್ಗಳಾದ ಈರಣ್ಣ ಹೊನ್ನಳ್ಳಿ, ಚಂದ್ರಿಕಾ ಪರಮೇಶ್ವರ, ಸಂತೋಷ ಪಾಟೀಲ್ ದುಧನಿ, ಪ್ರಮುಖರಾದ ರವೀಂದ್ರ ಶಾಬಾದಿ, ಶಿವಾನಂದ ಪಾಟೀಲ್ ಅಷ್ಟಗಿ, ಹೋರಾಟಗಾರ ಮಾರುತಿ ಮಾನ್ಪಡೆ, ಮಹ್ಮದ ಅಸಗರ್ ಚುಲ್ಬುಲ್, ಇತರರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts