More

    ಶ್ರೀ ವೀರಭದ್ರೇಶ್ವರ ಜಾತ್ರೆ ಸರಳ ಆಚರಣೆ



    ಮುಂಡರಗಿ: ಕರೊನಾ ವೈರಸ್ ಹರಡದಂತೆ ಮುಂಜಾಗ್ರತೆ ಕ್ರಮವಾಗಿ ಮಾ.29ರಿಂದ ತಾಲೂಕಿನ ಸುಕ್ಷೇತ್ರ ಶಿಂಗಟಾಲೂರ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವವನ್ನು ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಭಕ್ತರು ಜಾತ್ರೆಗೆ ಆಗಮಿಸಬಾರದು ಎಂದು ವೀರಭದ್ರೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ಕೋರಿದ್ದಾರೆ.

    ದೇವಸ್ಥಾನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರೆ ಪ್ರಯುಕ್ತ ಜರುಗುವ ಧಾರ್ವಿುಕ ಕಾರ್ಯಕ್ರಮಗಳನ್ನು ಸಂಕ್ಷಿಪ್ತವಾಗಿ ನೆರವೇರಿಸಲಾಗುತ್ತದೆ. ಕರೊನಾ ರೋಗದ ಭೀತಿ ಮುಗಿದ ನಂತರ ಸಮಯಾವಕಾಶ ನೋಡಿಕೊಂಡು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಳ್ಳಬೇಕು. ಮಾ.25ರಂದು ಉದ್ಘಾಟನೆಗೊಳ್ಳಬೇಕಿದ್ದ ಭದ್ರಕಾಳಮ್ಮನವರ ಮೂರ್ತಿ ಪ್ರತಿಷ್ಠಾಪನೆ ಮತ್ತು ನೂತನ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದೆ ಎಂದರು.

    ಜಾತ್ರೆಯಲ್ಲಿ ವ್ಯಾಪಾರ ವಹಿವಾಟಿಗೆ ನಿರ್ಬಂಧ ಹೇರಲಾಗಿದೆ. ಅಂಗಡಿ, ಮುಂಗಟ್ಟುಗಳನ್ನು ತೆರೆಯಲು ಅವಕಾಶವಿಲ್ಲ. ದೇವಸ್ಥಾನದಲ್ಲಿ ನಿತ್ಯ ದಾಸೋಹವನ್ನು ನಿಲ್ಲಿಸಲಾಗಿದೆ. ಭಕ್ತರಿಗೆ ನೀಡಲಾಗುತ್ತಿದ್ದ ವಸತಿ ಹಾಗೂ ಮತ್ತಿತರ ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ ಎಂದರು.

    ಭಕ್ತರ ಸಹಕಾರದಿಂದ 1 ಕೋಟಿ ರೂ. ವೆಚ್ಚದಲ್ಲಿ ಭದ್ರಕಾಳಮ್ಮನವರ ದೇವಸ್ಥಾನ ನಿರ್ವಣಗೊಳ್ಳುತ್ತಿದೆ ಎಂದು ಮಾಹಿತಿ ನೀಡಿದರು. ಎಪಿಎಂಸಿ ಸದಸ್ಯ ಕೊಟ್ರೇಶ ಬಳ್ಳೊಳ್ಳಿ, ಶೇಖಪ್ಪ ಬಾಲೇಹೊಸೂರ, ರಜನಿಕಾಂತ ದೇಸಾಯಿ, ನಾಗೇಶ ಹುಬ್ಬಳ್ಳಿ, ಲಿಂಗರಾಜ ಉಪ್ಪಾರ ಇತರರಿದ್ದರು.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts