More

    ಶ್ರೀಕಂಠೇಶ್ವರಸ್ವಾಮಿ ತೆಪ್ಪೋತ್ಸವ ಸಂಭ್ರಮ

    ನಂಜನಗೂಡು: ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ಚಿಕ್ಕಜಾತ್ರಾ ಮಹೋತ್ಸವದ ಪ್ರಯುಕ್ತ ಶನಿವಾರ ಕಪಿಲಾ ನದಿಯಲ್ಲಿ ತೆಪ್ಪೋತ್ಸವ ವಿಜೃಂಭಣೆಯಿಂದ ಜರುಗಿತು.

    ರಾತ್ರಿ 7.20ರಲ್ಲಿ ದೇವಾಲಯದಿಂದ ಪಾರ್ವತಿ ಸಮೇತ ಶ್ರೀಕಂಠೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ಮಂಗಳವಾದ್ಯದೊಡನೆ ಪಲ್ಲಕ್ಕಿ ಮೆರವಣಿಗೆ ಮೂಲಕ ಕಪಿಲಾ ನದಿಯ ದಡಕ್ಕೆ ತರಲಾಯಿತು. ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಅರ್ಚಕರು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಪೂರೈಸಿದ ನಂತರ ವಿದ್ಯುತ್ ದೀಪಾಲಂಕೃತ ತೇಲುವ ದೇವಾಲಯದಲ್ಲಿ ಶ್ರೀಕಂಠೇಶ್ವರಸ್ವಾಮಿ ಹಾಗೂ ಪಾರ್ವತಿದೇವಿಯನ್ನು ಕೂರಿಸಿ ತೆಪ್ಪೋತ್ಸವಕ್ಕೆ ಚಾಲನೆ ನೀಡಲಾಯಿತು.

    ಶ್ರೀಕಂಠೇಶ್ವರಸ್ವಾಮಿ ಉತ್ಸವಮೂರ್ತಿಯನ್ನು ವಜ್ರವೈಢೂರ್ಯ, ಮುತ್ತು ಹವಳ, ನವರತ್ನಗಳಿಂದ ಶೃಂಗರಿಸಲಾಗಿತ್ತು. ಅಲ್ಲದೆ, ನಾನಾ ಬಗೆಯ ವಿಶೇಷ ಹೂಗಳಿಂದ ತೇಲುವ ದೇವಾಲಯವನ್ನು ಅಲಂಕಾರ ಮಾಡಲಾಗಿತ್ತು. ಉತ್ಸವಮೂರ್ತಿ ಹೊತ್ತ ವಿದ್ಯುತ್ ದೀಪಾಲಂಕೃತ ತೆಪ್ಪವನ್ನು ನದಿಯಲ್ಲಿ 3 ಸುತ್ತು ಪ್ರದಕ್ಷಿಣೆ ಹಾಕಲಾಯಿತು.

    ತುಂತುರು ಮಳೆ ನಡುವೆಯೂ ನದಿಯ ಎರಡೂ ದಡದಲ್ಲಿ ನೆರದಿದ್ದ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡರು. ಶ್ರೀಕಂಠೇಶ್ವರಸ್ವಾಮಿಗೆ ಜೈಕಾರ ಕೂಗಿದರು. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಎಇಒ ವೆಂಕಟೇಶ್‌ಪ್ರಸಾದ್ ಇತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts