More

    ಶ್ರೀ ಅಮೃತೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ

    ಬೇಲೂರು: ತಾಲೂಕಿನ ಕಡೇಗರ್ಜೆ ಗ್ರಾಮದ ಶ್ರೀ ಅಮೃತೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ಶನಿವಾರ ರಾತ್ರಿ ವಿಶೇಷ ಪೂಜಾ ಮಹೋತ್ಸವವನ್ನು ಸೇವಾ ಸಮಿತಿಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಯಿತು.


    ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿ ಕಡೇಗರ್ಜೆ ಗ್ರಾಮದ ಶ್ರೀಅಮೃತೇಶ್ವರಸ್ವಾಮಿ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿಯ ವಿಶೇಷವಾಗಿ ದೇವರಿಗೆ ರುದ್ರಾಭಿಷೇಕ, ಕ್ಷೀರಾಭಿಷೇಕ ಹಾಗೂ ಮಹಾಪೂಜೆಯೊಂದಿಗೆ ಭಕ್ತರಿಗೆ ಮಂಗಳಾರತಿ ನಂತರ ಪ್ರಸಾದ ವಿನಿಯೋಗಿಸಲಾಯಿತು.


    ಹಿಂದುಗಳ ಆಚರಣೆಯಲ್ಲಿ ಶಿವರಾತ್ರಿ ಹಬ್ಬಕ್ಕೆ ವಿಶೇಷ ಸ್ಥಾನವಿದೆ. ಆ ಶುಭರಾತ್ರಿಯಂದು ಮೂರು ಲೋಕಗಳ ಜಾಗರಣೆ ಮೂಲಕ ಮಧ್ಯರಾತ್ರಿಯಲ್ಲಿ ಶಿವನಿಗೂ ಪಾರ್ವತಿಗೂ ಕಲ್ಯಾಣವಾಯಿತು. ಒಂದು ಶಿವರಾತ್ರಿ ವ್ರತವನ್ನು ಆಚರಿಸಿದರೆ ಸಾವಿರ ಏಕಾದಶಿ ವ್ರತಗಳು ಆಚರಿಸದಷ್ಟು ಫಲ ಹಾಗೂ ಕಾಶಿಯಲ್ಲಿ ಮುಕ್ತಿ ಸಿಗುತ್ತದೆ. ಅಲ್ಲದೆ ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ. ಆ ಅಜ್ಞಾನವನ್ನು ಕಳೆದು ಸುಜ್ಞಾನವನ್ನು ಬೆಳಗಿಸು ಎಂದು ಶಿವನನ್ನು ಬೇಡುವ ಶುಭ ದಿನವೇ ಶಿವರಾತ್ರಿ ಎಂಬುದನ್ನು ದೇವರಾಜಪುರ ಹರಿಕಥೆ ವಿದ್ವಾಂಸ ಎಂ.ಕೆ.ಮಲ್ಲೇಶ್, ‘ಸಿರಿಯಾಳ ಸತ್ವ ಪರೀಕ್ಷೆ’ ಎಂಬ ಹರಿಕಥೆ ನಡೆಸಿಕೊಟ್ಟರು.
    ಶ್ರೀಅಮೃತೇಶ್ವರಸ್ವಾಮಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ರವಿ.ಕೆ.ಎಸ್.ಮಾತನಾಡಿ, ಮಹಾಶಿವರಾತ್ರಿ ಪ್ರಯುಕ್ತ ಶ್ರೀಅಮೃತೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಕ್ಷೀರಾಭಿಷೇಕ ಹಾಗೂ ಮಹಾಪೂಜೆ ನಂತರ ಭಕ್ತರಿಗೆ ಪ್ರಸಾದ ವಿನಿಯೋಗಿಸಿ, ದೇವರ ಕೃಪೆಗೆ ಪಾತ್ರರಾಗಲು ಹರಿ ಕಥೆಯನ್ನು ಏರ್ಪಡಿಸಿದ್ದೇವೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts