ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಜನ್ಮದಿನದ ಪ್ರಯುಕ್ತ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ

G.H. SOMASHEKAR- press meet (19)
Published on

ಹಾಸನ: ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಜನ್ಮ ದಿನದ ಪ್ರಯುಕ್ತ ಜು.10 ರಿಂದ 21 ರ ವರೆಗೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಬಿಜಿಎಸ್ ಆಸ್ಪತ್ರೆಯಲ್ಲಿ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಸ್ಥಾನಿಯ ವೈದ್ಯಾಧಿಕಾರಿ ಸೋಮಶೇಖರ್ ತಿಳಿಸಿದರು.

ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೃಪಾ ಆಶೀರ್ವಾದಗಳೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದಿಚುಂಚನಗಿರಿ ಆಸ್ಪತ್ರೆ ಮತ್ತು ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಷನ್ ಇವರ ಸಹಯೋಗದೊಂದಿಗೆ ಈ ಶಿಬಿರ ನಡೆಸಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅಪಘಾತ ಇನ್ನಿತರ ಖಾಯಿಲೆಗಳಿಂದ ವಿಚ್ಚೇದಿತ ಆಗಿರುವ ವ್ಯಕ್ತಿಗಳಿಗೆ ಕೃತಕ ಕೈ ಮತ್ತು ಕಾಲುಗಳ ಅಳತೆ ಪಡೆದು ಸೂಕ್ತ ಉಪಕರಣವನ್ನು ಉಚಿತವಾಗಿ ವಿತರಿಸಲಾಗುವುದು. ಶಿಬಿರಾರ್ಥಿಗಳು ಮತ್ತು ಅವರ ಸಹಾಯಕರಿಗೂ ಊಟದ ವ್ಯವಸ್ಥೆ, ಜನರಲ್ ವಾರ್ಡ್, ಔಷಧೋಪಚಾರ ಉಚಿತವಾಗಿರುತ್ತದೆ ಎಂದರು.

ವಿಕಲ ಚೇತನರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಲ್ಲಿ ಅವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಈಗಾಗಲೇ 250ಕ್ಕೂ ಹೆಚ್ಚು ಜನ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದು ಇನ್ನು ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ಮಾಧ್ಯಮ ವಕ್ತಾರ ಬಿ.ಆರ್. ಬೊಮ್ಮೇಗೌಡ, ಸಾರ್ವಜನಿಕ ಸಂಪರ್ಕಾಧಿಕಾರಿ ಧಮೇರ್ಂದ್ರ, ವೈದ್ಯ ವೆಂಕಟೇಶ್ವರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net