More

    ಶ್ರೀ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟನೆ

    ಹಾಸನ: ದಾರ್ಶನಿಕರ ಸ್ಮರಣೆ ಮಾಡುವ ಮೂಲಕ ಸಮಾಜದಲ್ಲಿ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆಯುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಉದಯಕುಮಾರ್ ಕರೆ ನೀಡಿದರು.
    ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಹಮ್ಮಿ ಕೊಳ್ಳಲಾಗಿದ್ದ ಶ್ರೀ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
    ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಆದೇಶದಂತೆ ಇಂದು ಎಲ್ಲಾ ಕಡೆ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸರಳವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಗುತ್ತಿದೆ ಎಂದರು. ಈ ದಾರ್ಶನಿಕರ ಸ್ಮರಣೆ ಮಾಡುವ ಮೂಲಕ ಸಮಾಜದಲ್ಲಿ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆಯುವುದು ನಮ್ಮ ಕರ್ತವ್ಯವಾಗಿದೆ ಎಂದರು.
    ಕಾರ್ಯಕ್ರಮದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಬಿ.ಪಿ. ಐಸಾಮಿಗೌಡ, ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಜಿಲ್ಲಾ ವೀರಶೈವ ಲಿಂಗಾಯತ ಸಂಘದ ಉಪಾಧ್ಯಕ್ಷ ಬಿ.ಎಂ. ಭುವನಾಕ್ಷ, ಕಿರಣ್ ಕುಮಾರ್ ಹೊಸಮನಿ, ಪ್ರಧಾನ ಕಾರ್ಯದರ್ಶಿ ಇ.ಎಂ. ರುದ್ರಕುಮಾರ್, ಸಹಕಾರ್ಯದರ್ಶಿ ಬಿ.ಪಿ.ಲತೇಶ್, ಖಜಾಂಚಿ ಎಂ.ಪಿ. ಕಾಂತರಾಜ್, ನಿರ್ದೇಶಕರಾದ ಶೋಭನ್ ಬಾಬು, ಬಿ.ಎ. ನಾಗೇಶ್ , ಮಿಥುನ್, ವಿಶಾಲ್ ಐಗೂರು, ಬ್ಯಾಂಕ್ ಪರಮಶಿವಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts