More

    ಸಂಗೀತ ಜೀವನದ ಅವಿಭಾಜ್ಯ ಅಂಗ

    ಗೋಕಾಕ: ಒತ್ತಡದ ಜೀವನದಲ್ಲಿ ಸಂಗೀತ ಕೇಳುವುದರಿಂದ ನೆಮ್ಮದಿಯ ಜತೆಗೆ ಉಲ್ಲಾಸ ನೀಡುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

    ನಗರದ ರೋಟರಿ ರಕ್ತ ಭಂಡಾರ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ ಗೋಕಾಕ ತಾಲೂಕು ಘಟಕದ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಸಂಗೀತ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಗೀತ ಮತ್ತು ಸಂಸ್ಕೃತಿ ಜೀವನದ ಅವಿಭಾಜ್ಯ ಅಂಗಗಳಾಗಿದ್ದು, ಮಾನವನ ಬದುಕಿನಲ್ಲಿ ಸಂಗೀತ ಪ್ರಮುಖ ಪಾತ್ರ ವಹಿಸುತ್ತದೆ. ಸಂಗೀತ ಕಾರ್ಯಕ್ರಮಗಳು ಜನರನ್ನು ರಂಜಿಸುವ ಜತೆಗೆ ಒಂದೆಡೆ ಕಲೆಯುವಂತೆ ಮಾಡುತ್ತವೆ. ಹಾಗಾಗಿ ಇಂಥ ಕಾರ್ಯಕ್ರಮಗಳು ಹೆಚ್ಚೆಚ್ಚು ಆಯೋಜನೆ ಆಗಬೇಕು ಎಂದರು. ಘೋಡಗೇರಿಯ ಮಲ್ಲಯ್ಯ ಸ್ವಾಮೀಜಿ ಮಾತನಾಡಿ, ಅನಾದಿ ಕಾಲದಿಂದಲೂ ಸಂಗೀತ ಮಹತ್ತರ ಸ್ಥಾನ ಪಡೆದಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ . ಸಂಗೀತಕ್ಕೆ ರೋಗ ವಾಸಿ ಮಾಡುವ ಗುಣವಿದೆ. ಹಿತವಾದ ಸಂಗೀತ ಮಾನಸಿಕ ಒತ್ತಡ ಕಡಿಮೆ ಮಾಡಿ ಉಲ್ಲಾಸ ತುಂಬಬಲ್ಲದು. ಹಾಗಾಗಿ, ಆರೋಗ್ಯಕರ ಸಂಗೀತ ಆಲಿಸುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸಾಹಿತಿ ಪ್ರೊ.ಚಂದ್ರಶೇಖರ ಕಕ್ಕಿ, ರೋಟರಿ ರಕ್ತ ಭಂಡಾರದ ಚೇರ್ಮನ್ ಮಲ್ಲಿಕಾರ್ಜುನ ಕಲ್ಲೋಳ್ಳಿ, ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ಘಟಕದ ಅಧ್ಯಕ್ಷ ಸೋಮಶೇಖರ ಮಗದುಮ್ಮ, ಅಖಿಲ ಭಾರತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಹಾಂತೇಶ ತಾಂವಶಿ, ಗಾನಯೋಗಿ ಸಂಗೀತ ಪರಿಷತ್ ತಾಲೂಕಾಧ್ಯಕ್ಷೆ ವಿದ್ಯಾ ಮಗದುಮ್ಮ, ಉಪಾಧ್ಯಕ್ಷೆ ಅನುಶ್ರೀ ಧುಳಾಯಿ, ಪ್ರಧಾನ ಕಾರ್ಯದರ್ಶಿ ಶಶಿಕಲಾ ಶಿಂಧೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts