More

    ಸಂಗೀತ ವಿಶ್ವವಿದ್ಯಾಲಯದಲ್ಲಿ ಪರಿಸರ ದಿನಾಚರಣೆ

    ಮೈಸೂರು: ಹಸಿರೇ ನಮ್ಮ ಉಸಿರಾಗಬೇಕು ಆದ್ದರಿಂದ ಗಿಡವನ್ನು ನೆಟ್ಟು ಹಸಿರನ್ನು ಹೆಚ್ಚಿಸಿ ಪರಿಸರವನ್ನು ಸಂರಕ್ಷಿಸಿ ಎಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ನಾಗೇಶ್ ವಿ ಬೆಟ್ಟಕೋಟೆ ಹೇಳಿದರು.
    ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರ ಗಿಡ ನೆಟ್ಟು ನಂತರ ಅವರು ಮಾತನಾಡಿದರು.
    ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಗಟ್ಟುವುದು 2023ರ ಧ್ಯೇಯವಾಕ್ಯವಾಗಿದ್ದು ಈ ಮೂಲಕ ಪ್ಲಾಸ್ಟಿಕ್ ನ್ನು ತ್ಯಜಿಸಿ ಪರಿಸರವನ್ನು ಸಂರಕ್ಷಿಸಬೇಕಿದೆ. ನಮ್ಮೆಲ್ಲರ ಬದುಕಿಗೆ ಆಧಾರವಾಗಿರುವ ಪರಿಸರದ ರಕ್ಷಣೆಯ ಬಗ್ಗೆ ಮಕ್ಕಳಿಗೆ ತಿಳಿಹೇಳುವ ಮೂಲಕ ಅವರಲ್ಲಿ ಪರಿಸರ ಪ್ರೇಮ ಬೆಳೆಸುವ ಕಾರ್ಯಕ್ಕೆ ಪ್ರಜ್ಞಾವಂತ ಸಮುದಾಯ ಮುಂದಾಗಬೇಕಿದೆ. ಮುಂದಿನ ದಿನಗಳಲ್ಲಿ ಪರಿಸರ ಉಳಿಯಬೇಕಾದರೆ ನಾವೆಲ್ಲ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತರಾಗಬೇಕಿದೆ ಎಂದರು.
    ಇತ್ತೀಚಿನ ದಿನಗಳಲ್ಲಿ ಮಾನವ ತನ್ನ ಅತಿ ಆಸೆಗೆ ಪರಿಸರದ ಮೇಲೆ ದೌರ್ಜನ್ಯ ಎಸಗುತ್ತಿದ್ದು ,ಇದನ್ನು ತಪ್ಪಿಸುವ ಕೆಲಸಕ್ಕೆ ನಾವೆಲ್ಲ ಮುಂದಾಗಬೇಕು ಎಂದು ಕರೆ ನೀಡಿದರು. ಕಾಲಕಾಲಕ್ಕೆ ತಕ್ಕಂತೆ ಮಳೆ ಬೆಳೆ ಆಗಬೇಕಿದ್ದರೆ ಪರಿಸರ ಮಾಲಿನ್ಯವಾಗದಂತೆ ನೋಡಿ ಕೊಳ್ಳಬೇಕು. ನಮ್ಮೆಲ್ಲರಿಗೂ ಜೀವದಾತೆಯಾಗಿರುವ ಪರಿಸರದ ಬಗ್ಗೆ ನಾವು ಯಾವುದೇ ಕಾರಣಕ್ಕೂ ತಾತ್ಸಾರ ಮಾಡಬಾರದು. ಪ್ರತಿಯೊಂದು ಮನೆಯ ಮುಂದೆ ಗಿಡ ನೆಟ್ಟು ಬೆಳೆಸುವ ಪ್ರವತ್ತಿಯನ್ನು ನಾವು ಬೆಳೆಸಿಕೊಳ್ಳಬೇಕು. ವಾತಾವರಣದಲ್ಲಿ ಮರ ಹೆಚ್ಚಾದಂತೆ ಮರಗಿಡಗಳು ಮೋಡಗಳನ್ನು ಆಕರ್ಷಿಸಿ ಮಳೆ ಬರುವಂತೆ ಮಾಡುತ್ತವೆ ಎಂದು ತಿಳಿಸಿದರು.
    ಎನ್.ಎಸ್.ಎಸ್ ಸಂಯೋಜಕ ರಮೇಶ್, ಕೃಪಾಪಡ್ಕೆ, ವಿವಿ ಯ ಅಧ್ಯಾಪಕವೃಂದ, ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts