More

    ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಇಂದು

    ದಾವಣಗೆರೆ: ತಾಲೂಕಿನ ರುದ್ರನಕಟ್ಟೆ ಗ್ರಾಮದಲ್ಲಿ ನಿರ್ಮಿಸಲಾದ ಮೂರು ಲಕ್ಷ ರೂ. ಮೌಲ್ಯದ
    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅವಾವರಣ ಕಾರ್ಯಕ್ರಮ ಜ. 3 ರ ಬೆಳಗ್ಗೆ 10.30ಕ್ಕೆ ನಡೆಯಲಿದೆ.
    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಗರ್ಜನೆ ಸಂಘಟನೆಯ ಜಿಲ್ಲಾ ಘಟಕ, ಗ್ರಾಮ ಘಟಕ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿಯ ರಾಜ್ಯ ಉಪಾಧ್ಯಕ್ಷ ಎಸ್.ಎಸ್. ಗಿರೀಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಎಚ್.ಎಂ. ರೇವಣ್ಣ ಮತ್ತು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಮಾಜದ ಗುರುಗಳಾದ ಹಾಲಯ್ಯ ಒಡೆಯರ್ ಅಧ್ಯಕ್ಷತೆ ವಹಿಸುವರು‌
    ಶಾಸಕ ಕೆ.ಎಸ್.ಬಸವಂತಪ್ಪ, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಲೋಕಸಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಜಿ.ಬಿ. ವಿನಯ್‌ಕುಮಾರ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
    ಜಿಲ್ಲಾಧ್ಯಕ್ಷ ದೀಪಕ್ ಜೋಗಪ್ಪನವರ್, ಉಪಾಧ್ಯಕ್ಷ ಬಸವರಾಜ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಬಸವರಾಜ್, ಗಣೇಶ್, ಹನುಮಂತಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts