More

    ಸಂತ ಜೋಸೆಫರ ಕಾಲೇಜಿನಲ್ಲಿ ‘ಜೋ ಫೆಸ್ಟ್’

    ಮೈಸೂರು: ಶಿಕ್ಷಣ ಕೇವಲ ಪರೀಕ್ಷೆ ಬರೆದು ಉತ್ತೀರ್ಣವಾಗುವುದಕ್ಕೆ ಮಾತ್ರ ಸೀಮಿತವಲ್ಲ, ಪ್ರತಿಯೊಬ್ಬರ ವ್ಯಕ್ತಿತ್ವ ರೂಪಿಸುವುದೇ ನಿಜವಾದ ಶಿಕ್ಷಣ ಎಂದು ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಡಾ.ಡಿ.ಆನಂದ್ ಅಭಿಪ್ರಾಯಪಟ್ಟರು.

    ನಗರದ ಜಯಲಕ್ಷ್ಮೀಪುರಂನ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾಲೇಜಿನ ‘ಜೋ ಫೆಸ್ಟ್’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಕೌಶಲ್ಯ, ನಾಯಕತ್ವ ಗುಣ, ಬಿಕ್ಕಟ್ಟುಗಳು ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯ ಬೆಳೆಸಬೇಕು ಎಂದು ಹೇಳಿದರು.

    ಜಾಗತಿಕ ನಾಗರಿಕರಾಗಿ ರೂಪುಗೊಳ್ಳಲು ಉತ್ತಮ ಕೌಶಲ್ಯ ಹಾಗೂ ನಾಯಕತ್ವ ಗುಣಗಳ ಅವಶ್ಯಕತೆ ಇದ್ದು, ಈ ಗುಣಗಳನ್ನು ಬೆಳೆಸಿಕೊಳ್ಳುವ ಕಡೆಗೆ ವಿದ್ಯಾರ್ಥಿಗಳು ಗಮನ ಹರಿಸಬೇಕು. ವಿದ್ಯಾರ್ಥಿಗಳು ಪ್ರತಿಯೊಂದು ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸ್ಪರ್ಧೆಗಳಲ್ಲಿ ಸೋಲು, ಗೆಲುವು ಸಹಜ. ಆದರೆ, ಪ್ರತಿಯೊಂದು ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಸಲಹೆ ನೀಡಿದರು.

    ವೇದಿಕೆಯಲ್ಲಿ ಮೈಸೂರು ಧರ್ಮಪ್ರಾಂತ್ಯದ ಶೈಕ್ಷಣಿಕ ಸಂಸ್ಥೆಯ ಕಾರ್ಯದರ್ಶಿ ರೆವರೆಂಡ್ ಫಾದರ್ ವಿಜಯಕುಮಾರ್, ಆಡಳಿತಾಧಿಕಾರಿ ರೆವರೆಂಡ್ ಫಾದರ್ ಅವಿನಾಶ್, ತರಬೇತಿ ಮತ್ತು ಅಭಿವೃದ್ಧಿ ವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಬಿ ಮಾವೇಲಿ, ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ಚಂದ್ರಶೇಖರ, ಉಪ ಪ್ರಾಂಶುಪಾಲೆ ಆರ್. ಶಿಲ್ಪಾ, ರಮನಹಳ್ಳಿ ಸಂತ ಜೋಸೆಫರ ಕಾಲೇಜಿನ ಪ್ರಾಂಶುಪಾಲೆ ಪೃಥ್ವಿ ಶಿರಹಟ್ಟಿ, ರ‌್ಯಾಪರ್‌ಗಳಾದ ಎಂ.ಸಿ. ಬಿಜ್ಜು, ಔರ ಬಿಜ್ಜು, ವಿನಯ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts