More

    ಸಂಭ್ರಮದ ಹಾವನೂರ ಗ್ರಾಮದೇವಿ ಜಾತ್ರೆ

    ಗುತ್ತಲ: ಐತಿಹಾಸಿಕ ಹಿನ್ನೆಲೆಯ ಹಾವನೂರ ಗ್ರಾಮ ದೇವತಾ ಜಾತ್ರೆ ಸಡಗರ ಸಂಭ್ರಮದಿಂದ ಬುಧವಾರ ಜರುಗಿತು.

    ಬೆಳಗ್ಗೆ 4 ಗಂಟೆ ಸುಮಾರಿಗೆ ದೇವಸ್ಥಾನದಿಂದ ದೇವಿಯನ್ನು ಪೆಟ್ಟಿಗೆಯಿಂದ ಹೊರ ತಂದು ಹಳಿಬಂಡಿಯ ಮೂಲಕ ದೇವಿಯನ್ನು ಚೌತಮನೆ ಕಟ್ಟೆಯವರೆಗೆ ವಿವಿಧ ವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ವೇಳೆ ಬಾನೆತ್ತರದಲ್ಲಿ ಹಾರುವ ಮದ್ದುಗಳನ್ನು ಭಕ್ತರು ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು.

    ದೇವಿಯನ್ನು ಚೌತಮನೆ ಕಟ್ಟೆಗೆ ಕುಳ್ಳರಿಸಿ ಭಕ್ತರ ದರ್ಶನಕ್ಕೆ ಇಡಲಾಯಿತು. ಸಹಸ್ರಾರು ಭಕ್ತರು ಸರದಿಯಲ್ಲಿ ನಿಂತು ದೇವಿಯ ದರ್ಶನ ಪಡೆದರು.

    ಭಕ್ತರು ತಮ್ಮ ಹರಕೆಯ ಮುಡುಪುಗಳನ್ನು ತೀರಿಸಿದರು. ದೇವಿಯು ದೇವಸ್ಥಾನದಿಂದ ಚೌತಮನೆ ಕಟ್ಟೆ ಮತ್ತು ಚೌತಮನೆ ಕಟ್ಟೆಯಿಂದ ಗಡಿಗೆ ಹೋಗುವವರೆಗೂ ದೇವಿಯ ಮೇಲೆ ಹಾರುಗೋಳಿ ತೂರುವುದು ವಿಶೇಷವಾಗಿತ್ತು.

    ವರ್ಷಕೊಮ್ಮೆ ಕೇವಲ 13 ಗಂಟೆಗಳ ದರ್ಶನ ನೀಡುವ ದೇವಿಯ ದರ್ಶನವನ್ನು ಅಸಂಖ್ಯಾತ ಭಕ್ತರು ಪಡೆದರು. ನಂತರ ಸಂಜೆ 5 ಗಂಟೆ ಸುಮಾರಿಗೆ ದೇವಿಯನ್ನು ಗಡಿಗೆ ಕಳಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts