More

    ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೊಳಿಸಿ

    ಯಾದಗಿರಿ: ಸಂವಿಧಾನ ಹಾಗೂ ಅದರ ಪೀಠಿಕೆ ಮಹತ್ವವನ್ನು ತಿಳಿಯುವ ಸಂವಿಧಾನ ಜಾಗೃತಿ ಜಾಥಾವನ್ನು ಹೋಬಳಿ, ಗ್ರಾಮಗಳ ಹಾಗೂ ತಾಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ ಸಂಭ್ರಮದಿಂದ ಹಮ್ಮಿಕೊಳ್ಳುವಂತೆ ಜಿಪಂ ಸಿಇಒ ಗರೀಮಾ ಪನ್ವಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ಕರೆದಿದ್ದ ಸಭೆಯಲ್ಲಿ ಮಾತನಾಡಿ, ಭಾರತದ ಸಂವಿಧಾನವು ನಮಗೆಲ್ಲರಿಗೆ ಮೂಲಭೂತ ಹಕ್ಕುಗಳು, ಕರ್ತವ್ಯ ಸೇರಿದಂತೆ ಸ್ವಾತಂತ್ರ್ಯದ ಹಕ್ಕನ್ನು ನಿಗದಿಪಡಿಸಿದೆ. ನಾವು ಎಲ್ಲರೂ ಸಂವಿಧಾನಕ್ಕೆ ಋಣಿಯಾಗಿ ಇರಬೇಕು. ಈ ದಿಶೆಯಲ್ಲಿ ಸಕರ್ಾರ, ರಾಜ್ಯ ಮತ್ತು ಜಿಲ್ಲಾದ್ಯಂತ ಸಂವಿಧಾನ ಜಾಗೃತಿ ಜಾಥಾ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿದರ್ೇಶಿಸಿದ್ದು, ಎಲ್ಲರೂ ಈ ಜಾಥಾದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಸಲಹೆ ನೀಡಿದರು.

    ಜಿಲ್ಲೆಯ ವಿವಿಧ ಗ್ರಾಮಗಳು, ಹೋಬಳಿ, ತಾಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ ಈ ಜಾಥಾಕ್ಕೆ ಸಂಭ್ರಮದ ಸ್ವಾಗತ ಕೋರಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜಾಥಾ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು. ವಿವಿಧ ಇಲಾಖೆ ಗಳ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಸಂಘ ಸಂಸ್ಥೆಗಳವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಲು ಸೂಚಿಸಿದರು.

    ಅದರಂತೆ ವಿಕಲಚೇತನರಿಗಾಗಿ ಶಾಲಾ-ಕಾಲೇಜು ಮಕ್ಕಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ವಿಶೇಷವಾಗಿ ಜಾಥಾ ಹಮ್ಮಿಕೊಳ್ಳಬೇಕು. ಆಯಾ ತಾಪಂ ಇಒಗಳು ಸಮನ್ವಯತೆ ಸಾಧಿಸಬೇಕು. ವಿವಿಧ ಇಲಾಖೆಗಳು ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ವಿಶೇಷವಾಗಿ ಶಿಕ್ಷಣ ಇಲಾಖೆ ,ಆರೋಗ್ಯ ಇಲಾಖೆ ತಾಪಂ, ಪೊಲೀಸ್, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆ, ಆಯಾ ತಹಸೀಲ್ದಾರರು ವಿಶೇಷ ಗಮನ ನೀಡಿ ಜಾಥಾ ಯಶಸ್ವಿಗೊಳಿಸುವಂತೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts