More

    ಸಂಶಯಾಸ್ಪದ ಹಣದ ವ್ಯವಹಾರದ ಮೇಲೆ ನಿಗಾ ವಹಿಸಿ

    ಬಾಗಲಕೋಟೆ: ಬ್ಯಾಂಕಿನಲ್ಲಿ ಸಂಶಯಾಸ್ಪದ ಹಣದ ವ್ಯವಹಾರಗಳು ಕಂಡುಬಂದಲ್ಲಿ ತಕ್ಷಣವೇ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವನಾಧಿಕಾರಿ ಜಾನಕು ಕೆ.ಎಂ ಬ್ಯಾಂಕ್ ಪ್ರತಿನಿಧಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ವಿವಿಧ ಬ್ಯಾಂಕರ್ಸ್‍ಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು ಸಂಶಯಾಸ್ಪದ ರೀತಿಯಲ್ಲಿ ಬ್ಯಾಂಕ್ ಖಾತೆಯಿಂದ 1 ಲಕ್ಷ ರೂ.ಕ್ಕಿಂತ ಹೆಚ್ಚಿನ ಮೊತ್ತವನ್ನು ಠೇವಣಿ ಮಾಡುವುದಾಗಲಿ ಅಥವಾ ಹಣ ಪಡೆಯುವುದಾಗಲಿ, ಬೇರೆ ಬೇರೆ ಜಿಲ್ಲೆಯಲ್ಲಿನ, ವಿಧಾನಸಭಾ ವ್ಯಾಪ್ತಿಯಲ್ಲಿ ವ್ಯಕ್ತಿಗಳ ಖಾತೆಗೆ ಅಸಾಮಾನ್ಯ ರೀತಿಯಲ್ಲಿ ಆರ್‍ಟಿಜಿಎಸ್ ಮೂಲಕ ಹಣ ವರ್ಗಾವಣೆ ಮಾಡುತ್ತಿರುವ ವ್ಯವಹಾರಗಳ ಬಗ್ಗೆ ನಿಗಾ ವಹಿಸಬೇಕು. ಸಂಶಯಾಸ್ಪದ ಹಣದ ವ್ಯವಹಾರ ಕಂಡುಬಂದಲ್ಲಿ ತಕ್ಷಣ ಜಿಲ್ಲಾ ಚುನಾವಣಾಧಿಕಾರಿಗಳಿಗೆ ತಿಳಿಸಲು ಸೂಚಿಸಿದರು.

    ಬ್ಯಾಂಕ್‍ಗಳಿಂದ ನೈಜವಾದ ಹಣದ ಸಾಗಾಣಿಕೆ ಮಾಡುವಾಗ ಅನುಸರಿಸಬೇಕಾದ ಪ್ರಮಾಣಬದ್ದ ಕಾರ್ಯನಿರ್ವಹಣಾ ವಿಧಾನವನ್ನು ತಿಳಿಸಿದರು. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಇಂಡಿಯನ್ ಬ್ಯಾಂಕರ್ಸ್ ಅಸೋಸಿಯೇಷನ್ ನೀಡಿರುವಂತಹ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಯಾವುದೇ ಸಂದರ್ಭದಲ್ಲಿ ಬ್ಯಾಂಕಿನ ಹಣ ಸಾಗಾಣಿಕೆಯ ವಾಹನಗಳು ಹೊರಗುತ್ತಿಗೆ ಸಂಸ್ಥೆಯ ವಾಹನಗಳಾಗಲಿ, ಕಂಪನಿ ವಾಹನಗಳಾಗಲಿ ಕೇವಲ ಬ್ಯಾಂಕಿನ ಹಣವನ್ನು ಮಾತ್ರ ಸಾಗಾಣಿಕೆ ಮಾಡುವುದು ಎಂಬುದನ್ನು ಖಾತ್ರಿ ಪಡಿಸಿಕೊಂಡಿರಬೇಕು ಎಂದು ತಿಳಿಸಿದರು.

    ಹಣ ಸಾಗಾಣಿಕೆ ಮಾಡುವಾಗ ವಾಹನಗಳು ಯಾವ ಬ್ಯಾಂಕಿನಿಂದ ಹಣ ಪಡೆದುಕೊಂಡಿದ್ದರ ಕುರಿತು ಮತ್ತು ಎಟಿಎಂಗಳಿಗೆ ಭರಣ ಮಾಡಲು ಹೊರಟಿರುವ ಬಗ್ಗೆ ಸಂಬಂಧಿಸಿದ ಬ್ಯಾಂಕಿನಿಂದ ಪ್ರಮಾಣ ಪತ್ರ, ದಾಖಲೆಗಳನ್ನು ಹೊಂದಿರಬೇಕು. ಹೊರಗುತ್ತಿಗೆ ಸಂಸ್ಥೆಗಳ, ಕಂಪನಿಗಳ ಹಣ ಸಾಗಾಣಿಕಾ ವಾಹನಗಳ ತಪಾಸಣೆ ಮಾಡುವಾಗ ಸಹಕರಿಸಬೇಕು. ಹಣ ಸಾಗಾಣಿಕೆ ಬೆಳಿಗ್ಗೆ 10 ರಿಂದ ಸಂಜೆ 5 ವರೆಗೆ ನಡೆಸಲು ತಿಳಿಸಿದರು. ವಾಹನ ಚಾಲಕರು ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು. ಅಲ್ಲದೇ ಹಣ ಸಾಗಾಣಿಕೆ ಮಾಡುವಾಗ ಹಣದ ಭೌತಿಕ ಪರಿಶೀಲನೆಯನ್ನು ಪ್ಲಾಯಿಂಗ್ ಸ್ಕ್ವಾಡ್‍ಗಳಿಗೆ ಮಾಹಿತಿ ತಿಳಿಸಬೇಕು ಎಂದರು.

    ಯುಕೆಪಿ ಮಹಾ ವ್ಯವಸ್ಥಾಪಕ ರಮೇಶ ಕಳಸದ ಮಾತನಾಡಿ 10 ಲಕ್ಷ ರೂ.ಕ್ಕಿಂತ ಹೆಚ್ಚಿನ ಮೊತ್ತದ ಹಣವನ್ನು ಡಿಪಾಸಿಟ್ ಮಾಡುವುದಾಗಲಿ ಅಥವಾ ಹಿಂಪಡೆದುಕೊಂಡ ವ್ಯವಹಾರಗಳು ಕಂಡುಬಂದಲ್ಲಿ ತಕ್ಷಣ ಆದಾಯ ತೆರಿಗೆ ಇಲಾಖೆಗಳ ನೋಡಲ್ ಅಧಿಕಾರಿಗಳಿಗೆ ಮಾಹಿತಿ ಸಲ್ಲಿಸಬೇಕು. ಇದು ಸಹಕಾರಿ ಪತ್ತಿನ ಸಂಘಗಳಿಗೂ ಸಹ ಈ ನಿಯಮ ಅನ್ವಯಾಗಲಿದ್ದು, ಚುನಾವಣಾ ಆಯೋದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ನೀತಿ ಸಂಹಿತೆಗೆ ಉಲ್ಲಂಘನೆಯಾಗದಂತೆ ನಿಗಾವಹಿಸಿ ಮುಕ್ತ, ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಆಗಿರುವ ಖರ್ಚು ವೆಚ್ಚದ ನೋಡಲ್ ಅಧಿಕಾರಿ ಸಿದ್ದರಾಮ ಉಕ್ಕಲಿ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಶೈಲಜಾ, ಸಹಕಾರ ಸಂಘಗಳ ಉಪನಿಬಂಧಕ ಎಂ.ಬಿ.ಪೂಜಾರ ಸೇರಿದಂತೆ ವಿವಿಧ ಬ್ಯಾಂಕ್‍ನ ಪ್ರತಿನಿಧಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts