More

    ಸಂಸ್ಕಾರ ನೀಡದ ಶಿಕ್ಷಣ ಅರ್ಥಹೀನ- ಎನ್ಎಸ್ಎಸ್ ಕಾರ್ಯಕ್ರಮ

    ದಾವಣಗೆರೆ: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಆತ್ಮಸ್ಥೈರ್ಯ ತುಂಬುವ ಮೂಲಕ ದೇಶದ ಉತ್ತಮ ಪ್ರಜೆಯಾಗಿ ರೂಪಿಸುವುದು ಪ್ರಾಧ್ಯಾಪಕರ ಕರ್ತವ್ಯವಾಗಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
    ಚನ್ನಗಿರಿ ತಾಲೂಕಿನ ಬಸವಾಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಕ್ರೀಡಾ ಮತ್ತು ಎನ್ನೆಸ್ಸೆಸ್ ಚಟುವಟಿಕೆಗಳ ಸಮಾರೋಪದಲ್ಲಿ ಮಾತನಾಡಿದರು.
    ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಈ ಕಾಲೇಜಿಗೆ ಹೆಚ್ಚು ಪ್ರವೇಶ ಪಡೆಯುವುದರಿಂದ ಅಧ್ಯಾಪಕರು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಸಂಸ್ಕಾರ- ಸಾಮಾನ್ಯ ಜ್ಞಾನ ನೀಡದ ಶಿಕ್ಷಣದಿಂದ ಪ್ರಯೋಜನವಿಲ್ಲ. ವಿದ್ಯಾರ್ಥಿಗಳು ಶ್ರದ್ಧೆ-ಆಸಕ್ತಿಯಿಂದ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
    ಪಠ್ಯದ ಜತೆಗೆ ಜೀವನ ಸಾರವನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು. ಹಿಂದೆ ಅನೇಕ ಜಾನಪದ ಆಟಗಳು ನಮ್ಮ ಭವಿಷ್ಯ ರೂಪಿಸುತ್ತಿದ್ದವು. ಆದರೆ ಇಂದು ಸ್ಮಾರ್ಟ್‌ಫೋನ್‌ಗಳನ್ನು ಮಕ್ಕಳ ಕೈಗಿಟ್ಟು ಅವರ ಭವಿಷ್ಯವನ್ನು ಹಾಳು ಮಾಡುತ್ತಿದ್ದೇವೆ ಎಂದು ವಿಷಾದಿಸಿದರು.
    ಬೀದಿ ದೀಪದ ಕೆಳಗೆ ಅಧ್ಯಯನ ನಡೆಸಿ ಸಾಧನೆ ಮಾಡಿದ ಸಾಧಕರು ಅನೇಕರಿದ್ದಾರೆ. ಐಎಎಸ್, ಐಪಿಎಸ್‌ನಲ್ಲಿ ಶೇ.90ರಷ್ಟು ಉತ್ತೀರ್ಣರಾಗುವವರು ಸರ್ಕಾರಿ ಶಾಲೆಗಳಲ್ಲಿ ಕಲಿತವರೇ. ಹೀಗಾಗಿ ಗ್ರಾಮೀಣ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಮೂಲಕ ಐಎಎಸ್, ಐಪಿಎಸ್ ಅಧಿಕಾರಿಗಳಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
    ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ರಾಘವೇಂದ್ರ, ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಇದಾಯತ್, ರಮೇಶ್, ಲೋಕೇಶ್, ಸದ್ದಮ್ ಷಾ, ಅತಾವುಲ್ಲಾ, ಹೊನ್ನಪ್ಪ, ಹಾಲೇಶ್, ಅಲ್ಲಂಪಾಷಾ, ಖಲೀಲ್ ಅಹ್ಮದ್, ಜಯ್ಯಪ್ಪ, ಪರಶುರಾಮಪ್ಪ, ಡಾ.ಹಾಲೇಶ್, ಶಶಿಕುಮಾರ್, ಗ್ರಾಪಂ ಅಧ್ಯಕ್ಷ ಶಿವಾಜಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts