More

    ಸಕಾಲಕ್ಕೆ ಜನರ ಕೆಲಸಗಳಾಗುತ್ತಿಲ್ಲ

    ಸೋಮವಾರಪೇಟೆ: ಪಟ್ಟಣ ಪಂಚಾಯಿತಿಯ ಕೆಲ ಸಿಬ್ಬಂದಿ ಹಣಕ್ಕಾಗಿ ಸಾರ್ವಜನಿಕರನ್ನು ಪೀಡಿಸುತ್ತಿದ್ದಾರೆ. ದಿನವಿಡೀ ಕಾಯಿಸುತ್ತಾರೆ, ನಿಗದಿತ ಸಮಯದಲ್ಲಿ ಕೆಲಸ ಮಾಡಿಕೊಡುವುದಿಲ್ಲ ಎಂದು ಪಂಚಾಯಿತಿ ಸದಸ್ಯ ಜೀವನ್ ಆರೋಪ ಮಾಡಿದರು.

    ಬುಧವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಪಿ.ಕೆ.ಚಂದ್ರು ಅವರ ಅಧ್ಯಕ್ಷತೆ ನಡೆದ ಸಾಮಾನ್ಯ ಸಭೆಯಲ್ಲಿ ಪಂಚಾಯಿತಿ ಸಿಬ್ಬಂದಿ ಕಾರ್ಯವೈಖರಿ ವಿರುದ್ಧ ದೂರಿದರು.

    ಸಮಯಕ್ಕೆ ಸರಿಯಾಗಿ ಕೆಲಸ ಮಾಡಿಕೊಡಬೇಕು. ಸಾರ್ವಜನಿಕರ ವಿಪರಿತ ತೊಂದರೆಕೊಟ್ಟರೆ, ಅದರ ಪರಿಣಾಮವನ್ನು ಸದ್ಯದಲ್ಲೇ ಅನುಭವಿಸಬೇಕಾಗುತ್ತದೆ. ಪ್ರತಿಯೊಂದು ಕೆಲಸಗಳಿಗೂ ಬೇಕಾಗುವ ದಾಖಲಾತಿಗಳ ಪಟ್ಟಿಯನ್ನು ನೋಟಿಸ್ ಬೋರ್ಡ್‌ನಲ್ಲಿ ಹಾಕಬೇಕು. ಜನಸಾಮಾನ್ಯರ ಕೆಲಸಗಳನ್ನು ಸಕಾಲಕ್ಕೆ ಮಾಡಿಕೊಡಬೇಕು. ಈ ಬಗ್ಗೆ ಮುಖ್ಯಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕೆಂದು ಸದಸ್ಯೆ ಶೀಲಾ ಡಿಸೋಜ ಒತ್ತಾಯಿಸಿದರು.

    ಬೀಡಾಡಿ ದನಗಳಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ಎಸ್.ಆರ್.ಸೋಮೇಶ್, ಶೀಲಾ ಡಿಸೋಜ ಸಭೆಯಲ್ಲಿ ಚರ್ಚಿಸಿದರು. ಬೀಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ಸಾಗಿಸಲು ಕ್ರಮ ತೆಗೆದುಕೊಳ್ಳುವಂತೆ ನಿರ್ಣಯ ಕೈಗೊಳ್ಳಲಾಯಿತು.

    ಕುಡಿವ ನೀರಿನ ಸಮಸ್ಯೆ: ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜಿಗೆ ವಿದ್ಯುತ್ ಬಿಲ್ ಸೇರಿ ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿದೆ. ಆದರೆ ಕೆಲ ವಾರ್ಡ್‌ಗಳಿಗೆ ನಾಲ್ಕು ದಿನಗಳಿಗೊಮ್ಮೆ ನೀರು ಸರಬರಾಜಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ ಎಂದು ಉಪಾಧ್ಯಕ್ಷ ಬಿ.ಸಂಜೀವ, ಎಸ್.ಮಹೇಶ್, ಸೋಮೇಶ್, ನಾಗರತ್ನ, ಜಯಂತಿ ಶಿವಕುಮಾರ್ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts