More

    ಸಕ್ರಿಯ ಕ್ಷಯ ರೋಗ ಪತ್ತೆ ಡಿ. 1ರಿಂದ

    ಯಲ್ಲಾಪುರ: ತಾಲೂಕಿನಾದ್ಯಂತ ಡಿ. 1ರಿಂದ 31ರವರೆಗೆ ಸಕ್ರಿಯ ಕ್ಷಯ ರೋಗ ಪತ್ತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿ ಮನೆಮನೆಗೆ ತೆರಳಿ ಜನರಿಗೆ ಕ್ಷಯರೋಗದ ಕುರಿತು ಮಾಹಿತಿ ನೀಡಲಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ಹೇಳಿದರು.

    ಇಲ್ಲಿನ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ತಾ.ಪಂ. ಅಧ್ಯಕ್ಷೆ ಚಂದ್ರಕಲಾ ಭಟ್ಟ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

    ದೇಶದಲ್ಲಿ 3 ನಿಮಿಷಕ್ಕೆ ಒಬ್ಬರು ಕ್ಷಯ ರೋಗದಿಂದ ಸಾವನ್ನಪ್ಪುತ್ತಿದ್ದಾರೆ. ತಾಲೂಕಿನಲ್ಲಿ ಈವರಗೆ 3 ಜನ ಕ್ಷಯ ರೋಗದಿಂದ ಸಾವನ್ನಪ್ಪಿದ್ದಾರೆ. ಕರೊನಾದಿಂದ ಈವರೆಗೆ ಒಟ್ಟು 7 ಜನ ಸಾವನಪ್ಪಿದ್ದಾರೆ. ಕರೊನಾ ಕುರಿತು ನಿರ್ಲಕ್ಷ್ಯ ಮಾಡಬಾರದು ಎಂದರು.

    ತಹಸೀಲ್ದಾರ್ ಗಣಪತಿ ಶಾಸ್ತ್ರೀ ಮಾತನಾಡಿ, ಪ್ರತಿದಿನ 2 ಅಥವಾ 3 ಕರೊನಾ ಪ್ರಕರಣ ಬರುತ್ತಿವೆ. ಮಾಸ್ಕ್ ಧರಿಸುವ ಮೂಲಕ ರೊಗ ಹರಡುವುದನ್ನು ಶೇ. 90ರಷ್ಟು ತಡೆಯಬಹುದು. ಇದನ್ನು ನಿರ್ಲಕ್ಷಿಸಿದರೆ ಅಪಾಯ ಖಚಿತ ಎಂದರು.

    ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ತಮ್ಮ ಕಾರ್ಯದ ಬಗ್ಗೆ ನಿಗಾ ವಹಿಸದ ಕುರಿತು ಕೆಲ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಇಲಾಖೆ ಅಧಿಕಾರಿಗಳು ಯಾವುದೇ ಸಭೆಗೂ ಬರುತ್ತಿಲ್ಲ. ಹೆದ್ದಾರಿ ಪಕ್ಕ ಅರ್ಧಂಬರ್ದ ಕಾಮಗಾರಿ ಮಾಡಿ ಜನರನ್ನು ತೊಂದರೆಗೆ ಸಿಲುಕಿಸಿದ್ದಾರೆ ಎಂದು ಆರೋಪಿಸಿದರು.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಹಾಗೂ ಯಕ್ಷಸಿರಿ ಪ್ರಶಸ್ತಿ ಪುರಸ್ಕೃತ ಅರ್ಥಧಾರಿ ಎಂ.ಎನ್. ಹೆಗಡೆ ಹಳವಳ್ಳಿ ಅವರನ್ನು ತಾ.ಪಂ. ವತಿಯಿಂದ ಗೌರವಿಸಲಾಯಿತು. ಜಿ.ಪಂ. ಸದಸ್ಯೆ ಶ್ರುತಿ ಹೆಗಡೆ, ತಾ.ಪಂ. ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ತಿನೇಕರ್, ಇಒ ಜಗದೀಶ ಕಮ್ಮಾರ, ತೋಟಗಾರಿಕೆ ಇಲಾಖೆ ಅಧಿಕಾರಿ ಕೀರ್ತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts