More

    ಸಗರನಾಡಿಗಿಂದು ಸಿದ್ದು ದಂಡಯಾತ್ರೆ


    ಯಾದಗಿರಿ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಕಾರಣ ಕಾಂಗ್ರೆಸ್ನಿಂದ ಆರಂಭಗೊಂಡ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಶುಕ್ರವಾರ ಮಧ್ಯಾಹ್ನ ಶಹಾಪುರ ನಗರಕ್ಕೆ ಆಗಮಿಸಲಿದ್ದು, ಇದಕ್ಕಾಗಿ ಸ್ಥಳೀಯ ಶಾಸಕ ಶರಣಬಸಪ್ಪ ದರ್ಶನಾಪುರ ನೇತೃತ್ವದಲ್ಲಿ ಅಂತಿಮ ಸಿದ್ಧತೆ ಪೂರ್ಣಗೊಳಿಸಲಾಗಿದೆ.

    ನಗರದ ಭೀಮರಾಯನ ಗುಡಿ ರಸ್ತೆಯಲ್ಲಿನ ಎನ್ಜಿಓ ಕಾಲೋನಿಯ ಆವರಣದಲ್ಲಿ ಮಧ್ಯಾಹ್ನ 2 ಗಂಟೆಗೆ ಯಾತ್ರೆ ಆಗಮಿಸಲಿದ್ದು, ಬೃಹತ್ ಸಮಾವೇಶಕ್ಕೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ. ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಸಚಿವ ಪ್ರಿಯಾಂಕ ಖಗರ್ೆ ಪ್ರಕಾಶ್ ರಾಥೋಡ್ ಸೇರಿ ಇತರರು ಆಗಮಿಸಲಿದ್ದಾರೆ. ನಗರದ ಮುಖ್ಯ ರಸ್ತೆಯಲ್ಲಿ ಸಾಲು ಸಾಲು ಕಟೌಟ್ಗಳು, ದ್ವಾರಗಳು, ಕಾರ್ಯಕ್ರಮ ನಡೆಯುವ ಸ್ಥಳದವರೆಗೂ ನವ ವಧುವಿನಂತೆ ಸಿಂಗಾರಗೊಂಡಿದೆ.

    ಜಿಲ್ಲೆಯ 4 ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ವಶಕ್ಕೆ ಪಡೆಯುವ ಲೆಕ್ಕಾಚಾರ ಹಾಕಿಕೊಂಡಿದ್ದು, ಮೇಲಿಂದ ಮೇಲೆ ಜಿಲ್ಲೆಗೆ, ಪಕ್ಷದ ರಾಜ್ಯ ನಾಯಕರು ಆಗಮಿಸಿ ಕಾರ್ಯಕರ್ತರಲ್ಲಿ ಹುರುಪು ಮೂಡಿಸುತ್ತಿದ್ದಾರೆ. ಅಲ್ಲದೆ ಪ್ರಜಾಧ್ವನಿ ಯಾತ್ರೆಯ ನಿಮಿತ್ತ ಸ್ಥಳೀಯ ಕಾಂಗ್ರೆಸ್ನಲ್ಲಿ ಉತ್ಸಾಹ ಗರಿಗೆದರಿದೆ.

    ಸಮಾವೇಶದಲ್ಲಿ 50 ಸಾವಿರಕ್ಕೂ ಅಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಆಸನ ಶುದ್ಧ ಕುಡಿಯುವ ನೀರು ಎಲ್ಲರಿಗೂ ಅಚ್ಚುಕಟ್ಟಾದ ಊಟದ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಮಹಿಳೆಯರು ಅಡಿಗೆ ತಯಾರಿಯ ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನೂ ಸಿದ್ದರಾಮಯ್ಯ ಹೆಲಿಕ್ಯಾಪ್ಟರ್ ಮೂಲಕ ಇಲ್ಲಿನ ಭೀಮರಾಯನ ಗುಡಿಗೆ ಬಂದಿಳಿಯಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts