More

    ಸತತ ಪರಿಶ್ರಮದಿಂದ ಗೆಲುವು ಸಾಧ್ಯ

    ಬೈಲಹೊಂಗಲ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧಿಸುವ ಗುರಿ ಇಟ್ಟುಕೊಂಡು ಸತತ ಪರಿಶ್ರಮದೊಂದಿಗೆ ರಾಷ್ಟ್ರ ಮಟ್ಟದಲ್ಲಿ ಮಿಂಚಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
    ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಪಂ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ಪಟ್ಟಣದ ಕೆಆರ್‌ಸಿಎಸ್ ಕಾಲೇಜ್ ಆವರಣದಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗ ಮಟ್ಟದ ವಸತಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳ ಹಾಗೂ ನೌಕರರ ಕ್ರೀಡಾಕೂಟವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಆಟಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ. ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಅತ್ಯವಶ್ಯವಾಗಿದೆ. ಸಾಧನೆ ಮಾಡಿ ಪಾಲಕರಿಗೆ, ಶಾಲೆಗಳಿಗೆ ಕೀರ್ತಿ ತರಬೇಕು ಎಂದರು.

    ಸಭೆಯ ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ ಮಾತನಾಡಿ, ಸರ್ಕಾರ ಬಡ ಮಕ್ಕಳ ಶ್ರೇಯೋಭಿವದ್ಧಿಗಾಗಿ ರಾಜ್ಯದ ವಸತಿ ಶಾಲೆಗಳಿಗೆ ಹಲವಾರು ಯೋಜನೆ ರೂಪಿಸಿ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆಟ-ಪಾಠಗಳಲ್ಲಿ ಗುರಿ ಸಾಧಿಸಿ ಎಂದರು.

    ಸಮಾಜ ಕಲ್ಯಾಣ ಇಲಾಖೆಯ ಬೆಳಗಾವಿಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಲಕ್ಷ್ಮಣ ಬಬಲಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಸವರಾಜ ಕುರಿಹುಲಿ, ಬಿಇಒ ಎ.ಎನ್.ಪ್ಯಾಟಿ, ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಗಂಗರೆಡ್ಡಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ ಕರಿಸಿರಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸಿ.ಬಿ.ಯಮನೂರ, ಪ್ರಾಂಶುಪಾಲರಾದ ಮಹಾದೇವ ಹುಲಗೆಜ್ಜಿ, ಎಂ.ವಿ.ಕುಂಬಾರ, ಐ.ಎಸ್.ಮುನವಳ್ಳಿ, ಉಮೇಶ ಸುಭೇದಾರ, ಸಿ.ವೈ.ಮರೆಮ್ಮಗೋಳ ಇತರರು ಇದ್ದರು. ಕ್ರೀಡಾ ಜ್ಯೋತಿಯನ್ನು ಬರ ಮಾಡಿಕೊಳ್ಳಲಾಯಿತು. ಈ ಮೊದಲು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಾಸಕ ಮಹಾಂತೇಶ ಕೌಜಲಗಿ ಹಾಗೂ ಜಂಟಿ ನಿರ್ದೇಶಕಿ ಡಾ. ಉಮಾ ಸಾಲಿಗೌಡರ ಅವರು ಪ್ರಶಸ್ತಿ ಪತ್ರ ಹಾಗೂ ಲಕಗಳನ್ನು ವಿತರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts