More

    ಸತ್ಯಾಗ್ರಹ ಮೂಲಕ ಕೀಳು ಮಟ್ಟದ ವರ್ತನೆ

    ಬಾಗಲಕೋಟೆ: ರಾಜ್ಯದಲ್ಲಿ ಭೀಕರ ಬರಗಾಲವಿದೆ. ಜಲಾಶಯದಲ್ಲಿ ನೀರಿಲ್ಲ. ಜನ, ಜಾನುವಾರು ಸಂಕಷ್ಟಕ್ಕೆ ಸಿಲುಕಿವೆ. ನೆರವಿಗೆ ಧಾವಿಸಬೇಕಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ. ಸತ್ಯಾಗ್ರಹ ಮೂಲಕ ಕೀಳುಮಟ್ಟದ ವರ್ತನೆ ಮಾಡುತ್ತಿದೆ ಎಂದು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರ ವಿರುದ್ಧ ಗುಡಗಿದರು.

    ಲೋಕಸಭಾ ಚುನಾವಣೆ ಪ್ರಚಾರದ ಅಂಗವಾಗಿ ನಗರದ ತೋವಿವಿ ಪಕ್ಕದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.

    ರೈತರು ಬರಗಾಲದಿಂದ ತತ್ತರಿಸಿ ಹೋಗಿದ್ದಾರೆ. ಕಾಂಗ್ರೆಸ್ ಸರ್ಕಾರ ಸಮರ್ಪಕ ಬರ ಪರಿಹಾರ ನೀಡಿಲ್ಲ. ಸುಖಾಸುಮ್ಮನೇ ಆರೋಪ ಮಾಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಒಂದೇ ವರ್ಷದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಉಳಿಸಿಕೊಂಡಿಲ್ಲ. ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬೇಕು. ವಿಜಯಪುರ-ಬಾಗಲಕೋಟೆ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನು ಎರಡು ಲಕ್ಷ ಮತಗಳ ಅಂತದಿಂದ ಗೆಲ್ಲಿಸಬೇಕು. ರಾಜ್ಯದ ೨೮ ಲೋಕಸಭಾ ಕ್ಷೇತ್ರಗಳನ್ನು ಎನ್‌ಡಿಎ ಮೈತ್ರಿಕೋಟ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

    ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದೇಶದ್ರೋಹಿಯಾಗಿದೆ. ಸಮಾಜದಲ್ಲಿ ಶಾಂತಿ ಕಾಪಾಡುತ್ತಿಲ್ಲ. ಹುಬ್ಬಳ್ಳಿಯಲ್ಲಿ ನಡೆದ ಘಟನೆ ಇದಕ್ಕೆ ಸಾಕ್ಷಿ. ನೇಹಾ ಪ್ರಕರಣದಿಂದ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ ಎನ್ನುವುದು ಗೊತ್ತಾಗುತ್ತದೆ. ಕಣ್ಣೀದ್ದರು ಕುರಡರಂತೆ, ಬಾಯಿ ಇದ್ದರು ಮೂಕ ನಂತೆ ಇದೆ. ಪಾಕಿಸ್ತಾನ ಪರ ಘೋಷಣೆ ಕೂಗಿದವರಿಗೆ ರಕ್ಷಣೆ ನೀಡುತ್ತಿದೆ. ಕಾನೂನು ಸುವ್ಯವಸ್ಥೆ ಹಾಳಾಗಿದೆ. ೧೦ ಕೆಜೆ ಕೊಡಲಿಲ್ಲ. ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದೆ. ವೀರಶೈವ ಲಿಂಗಾಯತ ಒಡೆಯುವ ಪ್ರಯತ್ನ. ಅಲ್ಪ ಸಂಖ್ಯಾತರಿಗೆ ೧೦ ಸಾವಿರ ಕೋಟಿ ರೂ. ನೀಡುತ್ತಿದೆ. ಇಂತಹ ಸರ್ಕಾರ ಬೇಕಾ? ಕೇಂದ್ರದಲ್ಲಿ ಪ್ರಧಾನ ಮೋದಿ ಸುಭದ್ರ ಸರ್ಕಾರ ನೀಡುತ್ತಿದ್ದಾರೆ. ವಿರೇಂದ್ರ ಪಾಟೀಲ ಅವರನ್ನು ಸಿಎಂ ಸ್ಥಾನದಿಂದ ಕಾಂಗ್ರೆಸ್ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿತು. ಕಾಂಗ್ರೆಸ್ ಗೆದ್ದರೇ ಇಲ್ಲಿನ ವಿರೋಧ ಪಕ್ಷಕ್ಕೆ ಸಿಮೀತಗೊಳ್ಳುತ್ತಾರೆ. ಬಿಜೆಪಿ ಅಭ್ಯರ್ಥಿಗಳು ಗೆದ್ದರೇ ಸರ್ಕಾರದಲ್ಲಿ ಇರುತ್ತಾರೆ. ಜನ ಅರ್ಥಮಾಡಿಕೊಂಡು ಮತದಾನ ಮಾಡಬೇಕು ಎಂದರು.

    ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ, ವಿಜಯಪುರ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ, ರಾಜ್ಯ ಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿ.ಪ ಸದಸ್ಯರಾದ ಪಿ.ಎಚ್.ಪೂಜಾರ, ಹನುಮಂತ ನಿರಾಣಿ, ಶಾಸಕರಾದ ಸಿದ್ದು ಸವದಿ, ಮಹೇಶ ಟೆಂಗಿನಕಾಯಿ, ಜಗದೀಶ ಗುಡಗುಂಟಿ, ಮಾಜಿ ಶಾಸಕರಾದ ಎಂ.ಕೆ.ಪಟ್ಟಣಶೆಟ್ಟಿ, ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ರಾಜಶೇಖರ ಶೀಲವಂತ, ವಿ.ಪ ಮಾಜಿ ಸದಸ್ಯ ಜಿ.ಎಸ್.ನ್ಯಾಮಗೌಡ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts