More

    ಸದಾಶಿವ, ಕಾಂತರಾಜ್ ಆಯೋಗದ ವರದಿ ಜಾರಿಗೊಳಿಸಿ

    ಚಿತ್ರದುರ್ಗ: ನಿ.ನ್ಯಾಯಮೂರ್ತಿ ಎ.ಜೆ.ಸದಾಶಿವ, ಕಾಂತರಾಜ್ ಆಯೋಗದ ವರದಿ ಸದನದಲ್ಲಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಎಸ್‌ಡಿಪಿಐ ಅಧ್ಯಕ್ಷ ಅಬ್ದುಲ್ ಮಸ್ಜೀದ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

    ಸಾಮಾಜಿಕ ನ್ಯಾಯಕ್ಕಾಗಿ ಬೆಂಗಳೂರಿನಿಂದ ಹೊರಟಿರುವ ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾ ಗುರುವಾರ ಚಿತ್ರದುರ್ಗ ನಗರ ಪ್ರವೇಶಿಸಿದ ವೇಳೆ ಮಾತನಾಡಿದರು.

    ಆಯೋಗಗಳ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿ ಅನೇಕ ವರ್ಷಗಳಾಗಿದ್ದರೂ ಜಾರಿಗೆ ತಂದಿಲ್ಲ. ಈಗಲೂ ಮೀನಾಮೇಷ ಎಣಿಸುತ್ತಿದೆ. ನ್ಯಾಯಯುತ ಸಂವಿಧಾನಬದ್ಧ ಹಕ್ಕಾಗಿರುವ ಮೀಸಲಾತಿಯನ್ನು ಅರ್ಹರಿಗೆ ಒದಗಿಸಲು ಸರ್ಕಾರ ಕೂಡಲೇ ಅಧಿವೇಶನದೊಳಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

    ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಈ ಹಿಂದೆ ಇದ್ದ 2 ‘ಬಿ’ ಅಡಿಯ ಶೇ 4ರಷ್ಟು ಮೀಸಲಾತಿಯನ್ನು ಪುನಃ ಜಾರಿಗೊಳಿಸಿ ಶೇ 8ಕ್ಕೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

    ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್ ಮಾತನಾಡಿ, ದಲಿತರು, ಹಿಂದುಳಿದವರು, ಮುಸ್ಲಿಮರಿಗೆ ನ್ಯಾಯ ದೊರಕಿಸಿಕೊಡಲು ಕಾಂಗ್ರೆಸ್ ಶಾಸಕರು ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು.

    ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೂಡ್ಲಿಪೇಟೆ, ಭೀಮಯಾತ್ರೆ ಬಳಗದ ಮುಖಂಡ ಭಾಸ್ಕರ್ ಪ್ರಸಾದ್, ಕುಂಚಿಗನಹಾಳ್
    ಮಹಾಲಿಂಗಪ್ಪ, ಪದಾಧಿಕಾರಿಗಳಾದ ಜಾಕೀರ್ ಹುಸೇನ್, ಕಮ್ರಾನ್ ಆಲಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts