More

    ಸದಾಶಿವ ವರದಿ ಜಾರಿಗಾಗಿ 21 ರಂದು ಬೈಕ್ ರ‌್ಯಾಲಿ

    ಅಥಣಿ ಗ್ರಾಮೀಣ: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಪ್ರಸ್ತುತ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಕೇಂದ್ರಕ್ಕೆ ಶಿಾರಸು ಮಾಡಬೇಕೆಂದು ಆಗ್ರಹಿಸಿ ರಾಜ್ಯ ಮಾದಿಗರ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಬೈಕ್ ಜಾಥಾ ಹಾಗೂ ಧರಣಿ ಸತ್ಯಾಗ್ರಹವನ್ನು ಡಿ.21ರಿಂದ ಸುವರ್ಣಸೌಧದ ಎದುರು ಹಮ್ಮಿಕೊಳ್ಳಲಾಗಿದೆ ಎಂದು ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರಾಜೇಂದ್ರ ಐಹೊಳೆ ಹೇಳಿದರು.

    ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಪ್ರವಾಸಿ ಮಂದಿರದಲ್ಲಿ ಸೋಮವಾರ ಭಿತ್ತಿಪತ್ರ ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಸಾಮಾಜಿಕ ನ್ಯಾಯ ದೊರಕಿಸಲು 101 ಪರಿಶಿಷ್ಟ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಬೇಕೆಂದು ನ್ಯಾಯಮೂರ್ತಿ ಎ.ಜೆ. ಸದಾಶಿವ ಅಯೋಗ ವರದಿ ಸರ್ಕಾರಕ್ಕೆ ಶಿಾರಸು ಮಾಡಿ ವರ್ಷಗಳೇ ಕಳೆದಿವೆ. ಎಲ್ಲ ಪಕ್ಷಗಳ ಸರ್ಕಾರಗಳು ನಮ್ಮನ್ನು ವೋಟ್‌ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದ್ದು, ವರದಿ ಜಾರಿ ಕುರಿತು ನಿಜವಾದ ಆಸಕ್ತಿ ತೋರಿಸುತ್ತಿಲ್ಲ ಎಂದು ಆರೋಪಿಸಿದರು. ಈ ಚಳಿಗಾಲದ ಅಧಿವೇಶನದಲ್ಲಿ ವರದಿ ಮಂಡಿಸಿ, ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುವಂತೆ ನೋಡಿಕೊಳ್ಳಬೇಕು ಆಗ್ರಹಿಸಿ ಡಿ.15ರಂದು ಬೈಕ್ ರ‌್ಯಾಲಿ ಅಥಣಿ ಪಟ್ಟಣಕ್ಕೆ ಆಗಮಿಸಲಿದ್ದು, ಸಮುದಾಯದವರು ಪಾಲ್ಗೊಳ್ಳಬೇಕು ಎಂದರು. ಮಹಿಳಾ ಘಟಕದ ತಾಲೂಕಾಧ್ಯಕ್ಷೆ ಸುನೀತಾ ಐಹೊಳೆ ಮಾತನಾಡಿದರು. ಮೀಸಲಾತಿ ಹೋರಾಟ ಸಮಿತಿ ತಾಲೂಕಾಧ್ಯಕ್ಷ ಹಣಮಂತ ಅರ್ದಾವುರ, ಮಹಾದೇವಿ ಹೂಲಿಕಟ್ಟಿ, ಭೀಮವ್ವ ದೇವರಮನಿ, ಮಹಾದೇವ ಮಾದಿ, ಪ್ರಕಾಶ ಮಾದರ, ಆನಂದ ಮಾದರ, ಮೇತ್ರಿ ಐಹೊಳೆ, ಆಕಾಶ ಮಾದರ, ಭೀಮಪ್ಪ ದೇವರಮನಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts