More

    ಸದೃಢ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಅಗತ್ಯ


    ಯಾದಗಿರಿ: ಬಾಣಂತಿ ಹಾಗೂ ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಸೇವನೆ ಅಗತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸಲಹೆ ನೀಡಿದರು.
    ಶುಕ್ರವಾರ ನಗರದ ಚರಬಸವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕಾಡಳಿತ, ತಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಅಧಿಕಾರಿಗಳು ಬೇರೆ ಮಕ್ಕಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುವ ಮನೋಭಾವ ಬೆಳಸಿಕೊಳ್ಳಬೇಕು. ಇಲಾಖೆಗಳೊಂದಿಗೆ ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು. ಅಪೌಷ್ಟಿಕ ಮಕ್ಕಳು ಸೇರಿ ಗಭರ್ಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ತಲುಪಿಸಬೇಕು ಎಂದು ಸೂಚಿಸಿದರು.
    ಸಮಾಜದಲ್ಲಿನ ಕಟ್ಟ ಕಡೆಯ ವ್ಯಕ್ತಿಗೆ ಸರಕಾರ ಯೋಜನೆಗಳು ತಲುಪಿದಾಗ ಮಾತ್ರ ಯೋಜನೆಯ ಉದ್ದೇಶ ಸಾರ್ಥಕವಾಗುತ್ತದೆ. ಇಂದು ದಿನಬಳಕೆ ವಸ್ತುಗಳು ಗಗನ್ನೇರಿದ ಕಾರಣ ಬಡ ಮತ್ತು ಮಧ್ಯಮ ಕುಟುಂಬಗಳ ಪರಸ್ಥಿತಿ ಕೆಟ್ಟಿದೆ. ಇದನ್ನು ಮನಗೊಂಡ ನಮ್ಮ ಸರಕಾರ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರನ್ನು ಆಥರ್ಿಕವಾಗಿ ಸಬಲರನ್ನಾಗಿ ಮಾಡುವ ಸದುದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
    ಇದೇ ವೇಳೆ ಪೋಷಣ ಅಭಿಯಾನ ಯಶಸ್ವಿಗೆ ಕಾರಣರಾದ ಅಂಗನವಾಡಿ ಕಾರ್ಯಕತರ್ೆಯರನ್ನು ಹಾಗೂ ಮೇಲ್ವಿಚಾರಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ, ಗಭರ್ಿಣಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts