More

    ಸದೃಢ, ಬಲಿಷ್ಠ ದೇಶ ಕಟ್ಟಲು ಮತದಾನ ಮಾಡಿ

    ಬಳ್ಳಾರಿ : ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ಸದೃಢ ಹಾಗೂ ಬಲಿಷ್ಠ ದೇಶ ಕಟ್ಟುವಲ್ಲಿ ಕೈಜೋಡಿಸಬೇಕು ಎಂದು ಡಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದರು.
    ಇಲ್ಲಿನ ಎಸ್‌ಎಸ್‌ಎ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದೊಂದಿಗೆ ಮತದಾನ ಜಾಗೃತಿ ಅಂಗವಾಗಿ ಭಾನುವಾರ ನಡೆದ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
    ಮತದಾನದಲ್ಲಿ ಜನರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಮೂಲಕ ಮತದಾನ ಪ್ರಮಾಣವನ್ನು ಹೆಚ್ಚಿಸುವ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ವಿನೂತನ ಕಾರ್ಯಕ್ರಮವಾಗಿದೆ ಎಂದರು.
    ಭಾರತ ಚುನಾವಣಾ ಆಯೋಗವು ನೈತಿಕ ಚುನಾವಣೆ ನಡೆಸಲು ಮತದಾರರಿಗಾಗಿ ಹೊರ ತಂದಿರುವ ಸಿವಿಜಿಲ್, ಕೆವೈಸಿ, ಚುನಾವಣಾ, ಸಕ್ಷಮ್ ಆಪ್ಗಳು ಸೇರಿದಂತೆ ಸಹಾಯವಾಣಿ 1950 ಬಗ್ಗೆ ಜಾಗೃತಿ ಹೊಂದಬೇಕು ಎಂದರು.
    ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ನೈತಿಕ ಚುನಾವಣೆಯ ಕುರಿತು ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಅಭಿಯಾನ, ಮತದಾರರಿಗೆ ಭಿತ್ತಿಪತ್ರಗಳ ವಿತರಣೆ, ಎಲ್.ಇ.ಡಿ ವಾಹನಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
    ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಗ್ರಾಪಂ ವ್ಯಾಪ್ತಿಯಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮವು ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ಗ್ರಾಪಂ ಮಟ್ಟದಲ್ಲಿ ಪಿಡಿಒ ನೇತೃತ್ವದಲ್ಲಿ, ತಾಲೂಕು ಮಟ್ಟದಲ್ಲಿ ಆಯಾ ಕ್ಷೇತ್ರ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಏಕಕಾಲದಲ್ಲಿ ಧ್ವಜಾರೋಹಣಾ ಕಾರ್ಯಕ್ರಮ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts