More

    ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಕಡ್ಡಾಯವಾಗಿ ಮತದಾನ ಮಾಡಿ

    ಆಲಮೇಲ: 18 ವರ್ಷ ತುಂಬಿರುವ ಪ್ರತಿಯೊಬ್ಬ ಭಾರತೀಯ ಪ್ರಜೆಯು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಆಲಮೇಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿ- ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷೆ ರಿದಾ ಪಠಾಣ ಹೇಳಿದರು.

    ಪಟ್ಟಣದ ತಾಪಂ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಹಾಗೂ ಸ್ವೀಪ್ ಸಮಿತಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ದೇಶದ ಅತಿ ದೊಡ್ಡ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಬಹಳ ದೊಡ್ಡದಾಗಿದೆ. ಮತದಾನ ಕಾರ್ಯದಲ್ಲಿ ಪ್ರತಿಯೊಬ್ಬರೂ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮುಕ್ತ ಮನಸ್ಸು ಹಾಗೂ ನಿರ್ಭೀತಿಯಿಂದ ತಪ್ಪದೆ ಮತವನ್ನು ಚಲಾಯಿಸೋಣ ಎಂದರು.

    ತಾಪಂ ಸಹಾಯಕ ನಿರ್ದೇಶಕ ಸಿದ್ದರಾಮ ಅಂಕಲಗಿ ಮಾತನಾಡಿ, ಪ್ರಜಾಪ್ರಭುತ್ವದ ಯಶಸ್ವಿಗೆ ತಾವೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ತಮ್ಮ ಅಕ್ಕ-ಪಕ್ಕದವರು, ಹಿರಿಯ ನಾಗರಿಕರು, ಅಂಗವಿಕಲರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು ಎಂದರು.

    ತಾಪಂ ನರೇಗಾ ಐಇಸಿ ಸಂಯೋಜಕ ಬಸವರಾಜ ಹುಣಸಗಿ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.
    ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯ ತಾಲೂಕು ವ್ಯವಸ್ಥಾಪಕ ಸಿದ್ದು ಜಂಬಗಿ, ವಿವಿಧ ಮಹಿಳಾ ಸ್ವ ಸಹಾಯ ಸಂಘದ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts