More

    ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ತಲುಪಿಸಿ

    ಬಾಗಲಕೋಟೆ: ಸಫಾಯಿ ಕರ್ಮಚಾರಿಗಳಿಗೆ ಸರಕಾರ ನೀಡುವ ಪ್ರತಿಯೊಂದು ಸೌಲಭ್ಯಗಳನ್ನು ತಲುಪಿಸುವ ಕಾರ್ಯವಾಗಬೇಕೆಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಡಾ.ಪಿ.ಪಿ.ವಾವಾ ಅಧಿಕಾರಿಗಳಿಗೆ ತಿಳಿಸಿದರು.

    ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಾಭಿವೃದ್ದಿ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡ ಸಫಾಯಿ ಕರ್ಮಚಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವದರ ಜೊತೆಗೆ ಅವರಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣೆಗೆ ಒಳಗಪಡಿಸಬೇಕು. ಜಿಲ್ಲೆಯಲ್ಲಿರುವ ಇಎಸ್‍ಐ ಹಾಸ್ಪಿಟಲ್‍ಗಳ ಪಟ್ಟಿ ಮಾಡಿ ಸಫಾಯಿ ಕರ್ಮಚಾರಿಗಳಿಗೆ ಸ್ಥಳೀಯ ಸಂಸ್ಥೆಗಳು ನೀಡಲು ಸೂಚಿಸಿದರು.

    ಸಫಾಯಿ ಕರ್ಮಚಾರಿ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಸಹಾಯಧನ, ಸ್ವಯಂ ಉದ್ಯೋಗಕ್ಕೆ ಸಹಾಯಧನ, ಎಬಿಆರ್‍ಕೆ ಆರೋಗ್ಯ ಕಾರ್ಡ, ಇಎಸ್‍ಐ ಆಸ್ಪತ್ರೆಗಳಲ್ಲಿ ಉಚಿತವಾಗಿ ಗುಣಮಟ್ಟದ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಹಾಗೂ ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ ಪಡೆದುಕೊಂಡರು. ಗೃಹಭಾಗ್ಯ ಯೋಜನೆಯಡಿ ಸಫಾಯಿ ಕರ್ಮಚಾರಿಗಳಿಗೆ ವಸತಿ ಕಲ್ಪಿಸಿರುವ ಬಗ್ಗೆ ಮಾಹಿತಿ ಕೇಳಿದಾಗ ಇದಕ್ಕೆ ಪ್ರತಿಕ್ರಿಯಡಿಸಿದ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಪುನಿತ್ ಅವರು ಜಿಲ್ಲೆಯಲ್ಲಿ ನಿವೇಶನ ಇಲ್ಲದೇ ಇರುವ ಹಾಗೂ ನಿವೇಶ ಇದ್ದು ಮನೆ ಕಟ್ಟಿಕೊಳ್ಳದೇ ಇರುವ ಸಫಾಯಿ ಕರ್ಮಚಾರಿಗಳ ಮಾಹಿತಿಯನ್ನು ಸ್ಥಳೀಯ ಸಂಸ್ಥೆಗಳ ವಾರು ಪಟ್ಟಿ ಮಾಡಿ ಸೂರು ಒದಗಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿರುವುದಾಗಿ ತಿಳಿಸಿದರು.
    ಜಿಲ್ಲೆಯಲ್ಲಿ ಒಟ್ಟು 17 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಯಂ ಪೌರ ಕಾರ್ಮಿಕರು ಎಷ್ಟು ಗುತ್ತಿಗೆ, ಹೊಗುತ್ತಿಗೆ ಆಧಾರ ಮೇಲೆ ಕೆಲಸ ಮಾಡುವವರ ಮಾಹಿತಿ ಪಡೆದುಕೊಂಡು. ಅವರಿಗೆ ಪಿಎಫ್, ಇಎಸ್‍ಐ ಕಡಿತ ಮಾಡಿದ ಬಗ್ಗೆ ವಿಚಾರಿಸಿದರು. ಅಲ್ಲದೇ ಅವರ ಹೆಸರಿನಲ್ಲಿ ವಿಮೆ ಪಾಲಸಿ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ಹೆಚ್ಚಿನ ಚಿಕಿತ್ಸೆಗೆ ಖರ್ಚು ಮಾಡಿದ ಹಣ ಪಾವತಿಯಾಗುತ್ತಿಲ್ಲ. ಪೌರಕಾರ್ಮಿಕರಿಗೆ ಪ್ರತಿ ತಿಂಗಳು ಸಂಭಳ ಆಗದಿರುವ ಬಗ್ಗೆ ಕಾರ್ಮಿಕರು ಸಭೆಗೆ ತಿಳಿಸಿದಾಗ ಈ ಬಗ್ಗೆ ಕ್ರಮವಹಿಸುವುದಾಗಿ ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಪುನಿತ್, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಶಶಿಕಾಂತ ಶಿವಪುರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts