More

    ಸಬ್ಸಿಡಿ ಸೌಲಭ್ಯ ಪಡೆದು ಸಬಲರಾಗಿ

    ರಾಮದುರ್ಗ: ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಂಸ್ಕರಣಾ ಘಟಕ ಹಾಗೂ ಕಿರು ಉದ್ಯಮಗಳ ಸ್ಥಾಪನೆಗೆ ಕೃಷಿ ಇಲಾಖೆ ಸಹಯೋಗದಲ್ಲಿ ಸಬ್ಸಿಡಿ ಸಾಲ ಸೌಲಭ್ಯ ಒದಗಿಸುತ್ತಿದೆ. ಅವುಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

    ತಾಲೂಕಿನ ಸುನ್ನಾಳ ಶ್ರೀ ಮಾರುತೇಶ್ವರ ಕಲ್ಯಾಣ ಮಂಟಪದಲ್ಲಿ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಆತ್ಮ), ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಕಬ್ಬಿನಲ್ಲಿ ಗೊಣ್ಣೆ ಹುಳು ಬಾಧೆ ನಿರ್ವಹಣೆ ಕುರಿತು ಗುರುವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಬದಲಾಗುತ್ತಿರುವ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಕೃಷಿಯನ್ನು ಪ್ರೋತ್ಸಾಹಿಸಲು ಸರ್ಕಾರ ಅನೇಕ ಸೌಲಭ್ಯ ನೀಡುತ್ತಿದೆ. ರೈತರು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ ಸುಧೀಂದ್ರ ಕುಲಕರ್ಣಿ ಮಾತನಾಡಿದರು. ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಕೃಷಿಕ ಸಮಾಜದ ಅಧ್ಯಕ್ಷ ವೈ.ಎಚ್. ಪಾಟೀಲ, ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಮಲ್ಲಣ್ಣ ಯಾದವಾಡ ಮಾತನಾಡಿದರು. ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ಎಂ.ಬಿ. ಗೊಂದಿ, ಸುರೇಶಗೌಡ ಪಾಟೀಲ, ಶಿವಾನಂದ ಮಠಪತಿ, ಎಸ್.ಎಸ್. ಹಿರೇಮಠ, ಅರ್ಜುನ್.ಪಿ, ಮಹಾದೇವಪ್ಪ ನ್ಯಾಮಗೌಡ್ರ, ಸದಾಶಿವ ಮಾತನವರ, ಈರನಗೌಡ ಪಾಟೀಲ, ಭೀಮಪ್ಪ ಬಸಿಡೋಣಿ, ಶಂಕರಗೌಡ ಹೊಸಗೌಡ್ರ, ಬಾಬುಗೌಡ ಪಾಟೀಲ, ಅಶೋಕ ಕುಲಗೋಡ, ಶಾಸಪ್ಪ ನಾವಿ, ಸಹಾಯಕ ಕೃಷಿ ನಿರ್ದೇಶಕ ಎಸ್.ಎ್. ಬೆಳವಟಗಿ, ಆತ್ಮ ಯೋಜನೆಯ ತಾಲೂಕು ವಿಸ್ತೀರ್ಣಾಧಿಕಾರಿ ಗೋವಿಂದರಡ್ಡಿ ಜಾಯನ್ನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts