More

    ಸಮಗ್ರ ತನಿಖೆಗೆ ಆಗ್ರಹಿಸಿ ಸಿಎಂಗೆ ಮನವಿ

    ಧಾರವಾಡ: ಜಿಲ್ಲೆಯಲ್ಲಿ ಕೋವಿಡ್​ನಿಂದ ಬಾಧಿತರಾದವರ ಚಿಕಿತ್ಸೆಗೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ಅಗತ್ಯ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ನಡೆಸಲಾಗಿದ್ದು, ಸಮಗ್ರ ತನಿಖೆಯಾಗಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.

    ಈ ಕುರಿತು ಮುಖಂಡರು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆಯವರನ್ನು ಶುಕ್ರವಾರ ಭೇಟಿಯಾಗಿ, ಮುಖ್ಯಮಂತ್ರಿಗೆ ಮನವಿಪತ್ರ ರವಾನಿಸಿದರು.

    ಕರೊನಾ ಚಿಕಿತ್ಸೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ಅಗತ್ಯ ಪಿಪಿಇ ಕಿಟ್ ಹಾಗೂ ಇತರ ಸಲಕರಣೆಗಳನ್ನು ಮಾರುಕಟ್ಟೆ ದರಕ್ಕಿಂತ ಅಧಿಕ ಹಣ ನೀಡಿ ಖರೀದಿಸಲಾಗಿದೆ. ಕಡಿಮೆ ದರದಲ್ಲಿ ಸಲಕರಣೆಗಳನ್ನು ಪೂರೈಸುವ ಏಜೆನ್ಸಿಗಳು ಇದ್ದರೂ ಹೆಚ್ಚು ದರಪಟ್ಟಿ ನೀಡಿದ ಏಜೆನ್ಸಿಗಳಿಗೆ ಬಿಲ್ ಪಾವತಿಸಲಾಗಿದೆ. ಸರ್ಕಾರದ ಮತ್ತು ಐಸಿಎಂಆರ್​ನ ನಿಯಮಗಳನ್ನು ಪಾಲಿಸಿಲ್ಲ. ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಅಧಿಕ ಮೊತ್ತ ಪಾವತಿಸಿದ ಖರೀದಿ ವ್ಯವಹಾರವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

    ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ, ಮಂಜುನಾಥ ಭೋವಿ, ಎಸ್.ಎ. ಪವಾರ, ವಿಲ್ಸನ್ ಫರ್ನಾಂಡಿಸ್, ಬಸವರಾಜ ಪೂಜಾರ, ಅಕ್ಷಯ ಪಾಟೀಲ, ರವಿ ಗೌಳೆ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts