More

    ಸಮಗ್ರ ಬೆಳವಣಿಗೆಯ ಆಯವ್ಯಯ

    ಚಿಕ್ಕೋಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿ ಕೋನ ಇಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ರಾಜ್ಯದ ಆರ್ಥಿಕತೆ ಉತ್ತೇಜಿಸುವ ಹಲವು ಕ್ರಮಗಳಿವೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಬಿ. ಜಿರಲಿ ಹೇಳಿದರು.

    ಪಟ್ಟಣದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಗಳು 3,09,182 ಕೋಟಿ ರೂ.ಮೊತ್ತದ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ಭವಿಷ್ಯದ ಮುನ್ನೋಟವಿದ್ದು, ವಾಸ್ತವದ ಸವಾಲುಗಳನ್ನು ಮೆಟ್ಟಿ ನಿಂತು ಸಮೃದ್ಧ ಕರ್ನಾಟಕ ಕಟ್ಟುವ ಹಂಬಲದಿಂದ ಸಿಎಂ ಅರ್ಥಪೂರ್ಣ ಬಜೆಟ್ ರೂಪಿಸಿದ್ದಾರೆ ಎಂದರು.

    ಆರ್ಥಿಕ ಚಟುವಟಿಕೆಗಳ ವದ್ಧಿಯಿಂದ ರಾಜ್ಯದ ರಾಜಸ್ವ ಸಂಗ್ರಹಣೆಯಲ್ಲಿ ಹೆಚ್ಚಳವಾಗಿದೆ. ಮೋಟಾರು ವಾಹನಗಳ ತೆರಿಗೆ, ಮುದ್ರಾಂಕ ಮತ್ತು ನೋಂದಣಿ ಶುಲ್ಕವು ಸಹ ಹೆಚ್ಚಳವಾಗಿರುತ್ತದೆ ಎಂದರು. ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಮುಖ್ಯಮಂತ್ರಿ ಬೊಮ್ಮಾಯಿ ಮಂಡಿಸಿರುವ ಬಜೆಟ್‌ನಲ್ಲಿ ರೈತರು, ಮಹಿಳೆಯರು ಸೇರಿ ಎಲ್ಲರ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಚಿಕ್ಕೋಡಿ ಜಿಲ್ಲೆಯ ಹಲವು ಏತ ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡಿದ್ದು, ಶೀಘ್ರದಲ್ಲಿಯೇ ಚಾಲನೆ ನೀಡಲಿದ್ದಾರೆ ಎಂದರು.

    ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ಈಗಾಗಲೇ ಕೈಗಾರಿಕೆ ವಸಾಹತು ಪ್ರಾರಂಭಿ ಸಲಾಗಿದೆ. ಬಜೆಟ್‌ನಲ್ಲಿ ವಿಶೇಷ ಆರ್ಥಿಕ ವಲಯವನ್ನಾಗಿ ೋಷಿಸಿದ್ದು, ಈ ಭಾಗದ ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿಸಲಿದೆ ಎಂದರು. ಕಷ್ಣಾ ಮೇಲ್ದಂಡೆ ಯೋಜನೆಯಡಿ 5 ಸಾವಿರ ಕೋಟಿ ರೂ. ಅನುದಾನ, ರಾಯಬಾಗ ತಾಲೂಕಿನ ಸಸಾಲಟ್ಟಿ, ಚಿಕ್ಕೋಡಿ ತಾಲೂಕಿನ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ಜಾರಿಗೆ ತಂದಿದ್ದಾರೆ. ಕರಗಾಂವ ಏತ ನೀರಾವರಿ ಯೋಜನೆಗೆ ಶೀಘ್ರ ಮಂಜೂರಾತಿ ಸಿಗಲಿದ್ದು, ಚುನಾವಣೆ ಪೂರ್ವದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದರು.

    ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಶಾಂಭವಿ ಅಶ್ವತ್ಥಪುರ, ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೊಳ, ಸಂಜಯ ಪಾಟೀಲ, ಅಪ್ಪಾಸಾಹೇಬ ಚೌಗಲಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts