More

    ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ

    ಯಾದಗಿರಿ: ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳ ಸಮನ್ವಯತೆ ಅಗತ್ಯವಾಗಿದ್ದು ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ನಿದರ್ೇಶನ ನೀಡಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಟಾಸ್ಕ್ಪೊಸರ್್ ಸಮಿತಿ ಸಭೆಯಲ್ಲಿ ಮಾತನಾಡಿ, ಲಿಂಗಾನುಪಾತದ ಅಂತರವನ್ನು ಕಡಿಮೆ ಮಾಡುವುದು, ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆಯನ್ನು ತೆಗೆದುಹಾಕುವ ಉದ್ದೇಶದಿಂದ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ಜಾರಿ ಮಾಡಿದೆ. ಈ ಮೂಲಕ ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಲು ಮತ್ತು ಸಮಾಜದಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರೇರೇಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

    ಹೆಣ್ಣು ಮಕ್ಕಳಿಗೆ ಬಾಲ್ಯವಿವಾಹ ಮಾಡುವುದನ್ನು ತಡೆಗಟ್ಟಬೇಕು. ಗಭರ್ಾವಸ್ಥೆ ಹೆಣ್ಣು ಮಕ್ಕಳ ಭ್ರೂಣ ಪರೀಕ್ಷೆಗೆ ಒಳಪಡಿಸಬಾರದು. ಭ್ರೂಣ ಪರೀಕ್ಷೆಗೆ ಒಳಪಡಿಸಿದ್ದು ಕಂಡುಬಂದಲ್ಲಿ ಜಿಲ್ಲಾಡಳಿತ ಗಮನಕ್ಕೆ ತಂದರೆ, ಅಂಥವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಶಿಕ್ಷಣ, ಆರೋಗ್ಯ ಇಲಾಖೆ, ಪಂಚಾಯತರಾಜ್ ಇಲಾಖೆಗಳು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯೊಂದಿಗೆ ಹೆಚ್ಚಿನ ಸಹಕಾರ ನೀಡುವುದು. ಬಹಳ ಮುಖ್ಯವಾಗಿದ್ದು ಪ್ರತಿ ತಾಲೂಕು ಮಟ್ಟದಲ್ಲಿ ಟಾಸ್ಕ್ಫೋಸರ್್ ಸಮಿತಿ ಸಭೆಗಳನ್ನು ಅಚ್ಚುಕಟ್ಟಾಗಿ ಮಾಡಲು ಎಲ್ಲ ಅಧಿಕಾರಿ, ಸಿಬ್ಬಂದಿ ವರ್ಗ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.

    ಗ್ರಾಮೀಣ ಭಾಗದಲ್ಲಿನ ಜನತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುವ ಬಗ್ಗೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು. ಸಕರ್ಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಉಚಿತವಾಗಿ ಉನ್ನತ ಶಿಕ್ಷಣ ಒದಗಿಸುತ್ತಿದೆ. ಈ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts