More

    ಸಮಪರ್ಕ ನೀರು ಪೂರೈಸದಿದ್ದರೆ ಟೆಂಡರ್ ವಾಪಸ್

    ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡದಲ್ಲಿ ಒಂದು ವಾರದೊಳಗೆ ಸಮರ್ಪಕ ನೀರು ಪೂರೈಕೆಯಾಗದಿದ್ದರೆ ಎಲ್ ಆಂಡ್ ಟಿ ಸಂಸ್ಥೆಗೆ ನೀಡಿದ್ದ ಗುತ್ತಿಗೆಯನ್ನು ಹಿಂಪಡೆದು, ಸಂಸ್ಥೆಯನ್ನು ಕಪು್ಪಪಟ್ಟಿಗೆ ಸೇರಿಸುವುದಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ ನೀಡಿದ್ದಾರೆ.

    ಮಹಾನಗರ ಪಾಲಿಕೆ ಹಾಗೂ ಕುಡಿಯುವ ನೀರಿನ ಗುತ್ತಿಗೆದಾರರಾದ ಎಲ್ ಆಂಡ್ ಟಿ ಸಂಸ್ಥೆಯ ಅಧಿಕಾರಿಗಳೊಂದಿಗೆ ನಗರದಲ್ಲಿ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಸಚಿವ ಜೋಶಿ, ಅಸಮರ್ಪಕ ನೀರು ಪೂರೈಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

    ಅವಳಿ ನಗರದಲ್ಲಿ ಸಮರ್ಪಕ ನೀರು ಪೂರೈಕೆಯಾಗದಿರುವ ಬಗ್ಗೆ ಸಾರ್ವಜನಿಕರಿಂದ ಅನೇಕ ದೂರುಗಳು ಬರುತ್ತಿವೆ. ಒಂದು ವಾರದೊಳಗೆ ನೀರಿನ ಸಮರ್ಪಕ ಪೂರೈಕೆ ಹಾಗೂ ನಿರ್ವಹಣೆ ಆಗಬೇಕು ಎಂದು ಸೂಚಿಸಿದರು.

    ಜಲಮಂಡಳಿಯ ಹಳೇಯ ನೌಕರರನ್ನು ಮೂರು ದಿನದೊಳಗೆ ಮರು ನೇಮಕಾತಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಶಾಸಕ ಮಹೇಶ ಟೆಂಗಿನಕಾಯಿ, ಮಹಾಪೌರ ಈರೇಶ ಅಂಚಟಗೇರಿ, ಉಪ ಮಹಾಪೌರರಾದ ಉಮಾ ಮುಕುಂದ, ಪಾಲಿಕೆ ಸಭಾ ನಾಯಕ ತಿಪ್ಪಣ್ಣ ಮಜ್ಜಿಗಿ, ಆಯುಕ್ತ ಡಾ. ಬಿ. ಗೋಪಾಲಕೃಷ್ಣ, ಸದಸ್ಯರಾದ ಶಿವು ಮೆಣಸಿನಕಾಯಿ, ಬೀರಪ್ಪ ಖಂಡೆಕಾರ, ಕೆ.ಯು.ಐ.ಡಿ.ಎಫ್.ಸಿ. ಅಧಿಕಾರಿ ಮನಗೊಂಡ, ಸ್ಮಾರ್ಟ್​ಸಿಟಿ ಎಂಡಿ ಪ್ರಿಯಾಂಗಾ ಹಾಗೂ ಹಾಗೂ ಎಲ್ ಆಂಡ್ ಟಿ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts