More

    ಸಮಯ ಬದಲಾವಣೆಗೆ ಮನವಿ

    ಲಕ್ಷ್ಮೇಶ್ವರ: ಪಟ್ಟಣದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಬೇಕೆಂದು ಬಜಾರ ವ್ಯಾಪಾರಸ್ಥರ ಸಂಘದವರು ಉಪ ತಹಸೀಲ್ದಾರ್ ಮಂಜುನಾಥ ದಾಸಪ್ಪನವರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

    ಕರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ತಾಲೂಕಾಡಳಿತ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಿದೆ. ಆದರೆ, ಹೆಚ್ಚು ಕಾಲಾವಕಾಶದಿಂದ ಜನರು ಅನವಶ್ಯಕವಾಗಿ ಮಾರುಕಟ್ಟೆಯಲ್ಲಿ ತಿರುಗಾಡುತ್ತಿದ್ದಾರೆ. ಸಂಜೆವರೆಗೆ ಮಾರ್ಕೆಟ್ ಇದ್ದರೆ ಪಟ್ಟಣಕ್ಕೆ ಬೇರೆ ಬೇರೆ ಜಿಲ್ಲೆಗಳಿಂದಲೂ ವ್ಯಾಪಾರಕ್ಕೆ ಬರುತ್ತಾರೆ. ಎಷ್ಟೇ ಮುಂಜಾಗ್ರತೆ ಕೈಗೊಂಡರೂ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ವ್ಯಾಪಾರಸ್ಥರಲ್ಲಿ ಆತಂಕ ಮೂಡಿಸಿದೆ. ಆದ್ದರಿಂದ ಪಟ್ಟಣದಲ್ಲಿ ಬೆಳಗ್ಗೆ 9 ಗಂಟೆಯಿಂದ 2 ಗಂಟೆವರಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಎಂದು ಮನವಿಯಲ್ಲಿ ಕೋರಿದ್ದಾರೆ.

    ಅಲ್ಲದೆ, ಪಟ್ಟಣ ಪ್ರವೇಶಿಸುವ ಮಾರ್ಗದ ಚೆಕ್​ಪೋಸ್ಟ್​ಗಳನ್ನು ಬಿಗಿಗೊಳಿಸಬೇಕು. ಬೇರೆ ಊರುಗಳಿಂದ ಬರುವವರನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಸಂಘದ ಅಧ್ಯಕ್ಷ ಬಸವೇಶ ಮಹಾಂತಶೆಟ್ಟರ್, ಅಶೋಕ ಬಟಗುರ್ಕಿ, ಆದೇಶ ಬರಿಗಾಲಿ, ವೈಭವ ಗೋಗಿ, ಶಕ್ತಿ ಕತ್ತಿ ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts