More

    ಸಮರ್ಪಕ ಸೇವೆ ನೀಡದ ಸಿಬ್ಬಂದಿಯ ವರ್ಗ

    ಶಿರಸಿ: ಜನತೆಗೆ ಸಮರ್ಪಕ ಸೇವೆ ನೀಡದ ಜತೆ ಇಲಾಖೆ ನಿಯಮಾವಳಿಗೆಗಳನ್ನು ಗಾಳಿ ತೂರುತ್ತಿರುವ ಭೈರುಂಬೆ ಸರ್ಕಾರಿ ಆಯುರ್ವೆದ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ವರ್ಗಾವಣೆ ಮಾಡುವಂತೆ ಮೇಲಧಿಕಾರಿಗಳಿಗೆ ಪತ್ರ ಬರೆಯಲು ಇಲ್ಲಿನ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ತೀರ್ವನಿಸಲಾಯಿತು.

    ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿವಿಧ ಇಲಾಖೆಗಳ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ತಾಲೂಕಿನ ಭೈರುಂಬೆ ಸರ್ಕಾರಿ ಆಯುರ್ವೆದ ಆಸ್ಪತ್ರೆ ವೈದ್ಯಾಧಿಕಾರಿ ಹಾಗೂ ಓರ್ವ ಮಹಿಳಾ ಸಿಬ್ಬಂದಿ ಬದಲಾಯಿಸುವಂತೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಸ್ಪಂದನೆ ಸಿಗುತ್ತಿಲ್ಲ. ಇಬ್ಬರ ನಡುವಿನ ವೈಯಕ್ತಿಕ ಮನಸ್ತಾಪವು ಆಸ್ಪತ್ರೆಗೆ ಬರುವ ರೋಗಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ ಈರ್ವರನ್ನೂ ವರ್ಗಾವಣೆ ಮಾಡುವಂತೆ ತಾಲೂಕು ಪಂಚಾಯಿತಿಯಿಂದ ಮೇಲಧಿಕಾರಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು. ಇದಕ್ಕೆ ದನಿಗೂಡಿಸಿದ ನರಸಿಂಹ ಹೆಗಡೆ, ಭೈರುಂಬೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೂತನ ಕಟ್ಟಡ ನಿರ್ವಿುಸಲಾಗಿದೆ. ಸಂಬಂಧಪಟ್ಟ ಇಲಾಖೆಯಿಂದ ಹಸ್ತಾಂತರ ಬಾಕಿಯಿದ್ದು ಉದ್ಘಾಟನೆ ಆಗಬೇಕಿದೆ. ಆದರೆ ಉದ್ಘಾಟನೆಗೂ ಮುನ್ನವೇ ವೈದ್ಯರ ತರಾತುರಿ ನಿರ್ಣಯದಿಂದ ಹೊಸ ಆಸ್ಪತ್ರೆ ಕಟ್ಟಡ ಬಳಕೆಗೆ ಮುಕ್ತ ಮಾಡಲಾಗಿದೆ. ಸರ್ಕಾರದ ನಿಯಮಾವಳಿಗೆ ಬೆಲೆಯಿಲ್ಲದಂತೆ ವರ್ತಿಸುತ್ತಿರುವ ಇಂತಹ ವೈದ್ಯರ ಅಗತ್ಯವಿಲ್ಲ ಎಂದು ಅಸಮಾಧಾನ ಹೊರಹಾಕಿದರು.

    ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ ಮಾಹಿತಿ ನೀಡಿ, ಎಸ್​ಎಸ್​ಎಲ್​ಸಿ ಪರೀಕ್ಷೆ ಪೂರ್ವ ತಯಾರಿ ತಾಲೂಕಿನ ಎಲ್ಲ ಪ್ರೌಢಶಾಲೆಗಳಲ್ಲಿ ನಡೆದಿದ್ದು, ಉತ್ತಮ ಫಲಿತಾಂಶಕ್ಕೆ ಶ್ರಮಿಸಲಾಗುತ್ತಿದೆ. ತಾಲೂಕಿನ 60 ಶಾಲೆಗಳಲ್ಲಿ ತರಕಾರಿ ಕೈದೋಟ ಆರಂಭಿಸಲು ಸೂಚಿಸಲಾಗಿದೆ ಎಂದ ಅವರು, 2ನೇ ಜತೆ ಸಮವಸ್ತ್ರ ವಿತರಣೆ ಮಾಡಲು ಕ್ರಮವಹಿಸುವುದಾಗಿ ತಿಳಿಸಿದರು.

    ತಾಲೂಕಾ ವೈದ್ಯಾಧಿಕಾರಿ ವಿನಾಯಕ ಭಟ್ಟ ಇಲಾಖೆಯ ಮಾಹಿತಿ ನೀಡಿದರು. 2019-20ನೇ ಸಾಲಿನ ಯಾವುದೇ ಕಾಮಗಾರಿ ವಾಪಸ್ ಹೋಗದಂತೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧ್ಯಕ್ಷರು ಎಲ್ಲ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts