More

    ಸಮಸ್ಯೆ ಇದ್ದರೆ ನೇರವಾಗಿ ನನ್ನನ್ನು ಕಾಣಿ

    ಯಾದಗಿರಿ : ಗ್ರಾಮೀಣ ಸಮಸ್ಯೆಗಳ ಪರಿಹಾರಕ್ಕೆ ನಾನು ಕಟಿಬದ್ಧನಾಗಿದ್ದು, ಯಾವ ತೊಂದರೆ ಇದ್ದರೂ ಜನ ನೇರವಾಗಿ ನನ್ನನ್ನು ಕಾಣುವಂತೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸಲಹೆ ನೀಡಿದರು.

    ಮತಕ್ಷೇತ್ರದ ಮುಂಡರಗಿ, ಅಶೋಕ ನಗರ, ಅರಿಕೇರಾ(ಕೆ) ಮತ್ತು ರಾಮಸಮುದ್ರ ಗ್ರಾಮಗಳಲ್ಲಿ ಸೋಮವಾರ ಆಯೋಜಿಸಿದ್ದ ಶಾಸಕರ ನಡೆ, ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚುನಾವಣೆಯಲ್ಲಿ ಜನ ಆಶೀರ್ವಾದ ಮಾಡಿ ನನ್ನನ್ನು ವಿಧಾನಸಭೆಗೆ ಕಳಿಸಿದ್ದಾರೆ. ಅವರ ಋಣ ತೀರಿಸುವುದು ನನ್ನ ಕರ್ತವ್ಯ ಎಂದರು.

    ಮುಖ್ಯಮAತ್ರಿ ಸಿದ್ದರಾಮಯ್ಯ ನಾಡಿನ ಬಡ ಮತ್ತು ಮಧ್ಯಮ ವರ್ಗಗಳ ಕಲ್ಯಾಣಕ್ಕಾಗಿ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ. ಈಗಾಗಲೇ ಶಕ್ತಿ ಮತ್ತು ಗೃಹಜ್ಯೋತಿ ಯೋಜನೆಗಳು ಸಮರ್ಪಕ ಜಾರಿಗೊಂಡಿದ್ದು, ನಾಡಿನ ಜನರ ಮನೆ ಮಾತಾಗಿವೆ. ಮುಂದಿನ ದಿನಗಳಲ್ಲಿ ಜನರ ಕಲ್ಯಾಣಕ್ಕಾಗಿ ಸರ್ಕಾರ ಶ್ರಮಿಸಲಿದೆ ಎಂದು ಹೇಳಿದರು.

    ಕಾಂಗ್ರೆಸ್ ಎಂದಿಗೂ ನುಡಿದಂತೆ ನಡೆಯುವ ಪP್ಷÀ. ಬಡ ಜನರ ಆಶೋತ್ತರ ಈಡೇರಿಸುವುದು ನಮ್ಮ ಕರ್ತವ್ಯ. ಹೀಗಾಗಿ ಮತಕ್ಷೇತ್ರದ ಪ್ರತಿ ಗ್ರಾಮಕ್ಕೂ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆ ಅರಿಯಲು ನಮ್ಮ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹಾಕಿಕೊಂಡಿದ್ದಾಗಿ ತಿಳಿಸಿದರು.
    ಹಳ್ಳಿಗಳಲ್ಲಿ ಶುದ್ಧ ಕುಡಿವ ನೀರು, ಸ್ವಚ್ಛತೆ, ಶಿP್ಷÀಣ, ಆರೋಗ್ಯ ಹಾಗೂ ಮೂಲಸೌಲಭ್ಯ ಕಲ್ಪಿಸುವುದು ಮೊದಲ ಆದ್ಯತೆಯಾಗಿದೆ.

    ಅಧಿಕಾರಿಗಳು ಸಹ ಕಾಲಕಾಲಕ್ಕೆ ಜನರ ಸಮಸ್ಯೆ ಅರಿತುಕೊಳ್ಳಲು ಪ್ರಯತ್ನಿಸಬೇಕು ಎಂದು ನಿರ್ದೇಶನ ನೀಡಿದರು.
    ತಾಪಂ ಇಒ ಬಸವರಾಜ ಶರಬೈ, ಬ್ಲಾಕ್ ಕಾಂಗ್ರೆಸ್ ಅಧ್ಯP್ಷÀ ಸುದರ್ಶನ ನಾಯಕ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts