More

    ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿ ಜತೆ ಚರ್ಚೆ

    ಮುಂಡರಗಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ತಹಸೀಲ್ದಾರ್ ಕಚೇರಿ ಮುಂದೆ ನಡೆಸುತ್ತಿರುವ ಪ್ರತಿಭಟನೆ ಸ್ಥಳಕ್ಕೆ ಶಾಸಕ ರಾಮಣ್ಣ ಲಮಾಣಿ ಅವರು ಸೋಮವಾರ ಭೇಟಿ ನೀಡಿ ರ್ಚಚಿಸಿದರು.

    ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಜಯಕುಮಾರ ಬ್ಯಾಳಿ ಮಾತನಾಡಿ, ‘ನೌಕರರಿಗೆ ಸೇವಾ ಭದ್ರತೆ ನೀಡುವುದರೊಂದಿಗೆ ಎಲ್ಲ ಹುದ್ದೆಗಳನ್ನು ಕಾಯಂಗೊಳಿಸಬೇಕು. ವೇತನ ಭತ್ಯೆಗಳು ಮತ್ತು ವೇತನ ಶ್ರೇಣಿಯನ್ನು ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಆರೋಗ್ಯ ಭಾಗ್ಯ ಯೋಜನೆ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು’ ಎಂದರು.

    ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ರಾಮಣ್ಣ ಲಮಾಣಿ ಅವರು, ‘ಈ ಕುರಿತು ಮುಖ್ಯಮಂತ್ರಿ ಹಾಗೂ ಆರೋಗ್ಯ ಮಂತ್ರಿ ಜತೆ ರ್ಚಚಿಸಿ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.

    ಬೇಡಿಕೆಗಳ ಕುರಿತು ಶಾಸಕ ರಾಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು. ಕೆ.ವಿ. ಹಂಚಿನಾಳ, ಆನಂದಗೌಡ ಪಾಟೀಲ, ಡಾ.ಕುಮಾರಸ್ವಾಮಿ ಹಿರೇಮಠ, ಸುಭಾಸ ಗುಡಿಮನಿ, ತಿಮ್ಮರೆಡ್ಡಿ ಮರಡ್ಡಿ, ಡಾ.ಶಂಕರ ಭಾವಿಮನಿ, ಡಾ.ಜಹಾಂಗೀರ ಹಾರೋಗೇರಿ, ಡಾ.ನಂದಾ ಶಾಸ್ತ್ರಿ, ಡಾ.ವಿದ್ಯಾ ಗದ್ದಿ, ಬೀಬಿಜಾನ್ ಸುಂಕದ, ಉಮೇಶ ದೇವರಮನಿ, ಪ್ರೇಮಾ ರೆಡ್ಡಿ, ಶೋಭಾ ಸವಣೂರ, ಸುಭಾಸ ಅಂಗಡಿ, ಹನುಮಾಕ್ಷಿ ಕಗ್ಗಲ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts