More

    ಸಮಾಜದ ಸುವ್ಯವಸ್ಥೆ ನಮ್ಮ ಹೊಣೆ

    ರಾಯಬಾಗ: ಸಮಾಜದ ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಬಸವರಾಜಪ್ಪ ಕೆ.ಎಂ. ಹೇಳಿದರು.

    ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ಕಾನೂನು ಮಹಾವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಎಸ್‌ಪಿಎಂ ಕಾನೂನು ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಎಲ್ಲರ ಜತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ. ಎಲ್ಲರೂ ಶಾಂತಿಯುತ ಜೀವನ ನಡೆಸಬೇಕು ಎಂದರು.

    ಎಸ್‌ಪಿಎಂ ಕಾರ್ಯದರ್ಶಿ ಎಸ್.ಎಸ್.ಶಿಂಗಾಡಿ ಮಾತನಾಡಿ, ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು. ಅವರಿಗೆ ಸಾಮಾಜಿಕ ಮೌಲ್ಯಗಳ ಬಗ್ಗೆ ತಿಳಿಸಿಕೊಟ್ಟು ಬುನಾದಿಯಲ್ಲೇ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.

    ಪ್ರಧಾನ ದಿವಾಣಿ ನ್ಯಾಯಾಧೀಶ ಅಲೋಕ ಎ.ಎನ್., ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಮಂಜುನಾಥ ಪಾನಘಂಟಿ, ವಕೀಲರ ಸಂಘದ ಅಧ್ಯಕ್ಷ ಆರ್.ಎಚ್.ಗೊಂಡೆ, ಉಪಾಧ್ಯಕ್ಷ ಎಂ.ಎಂ.ಚಿಂಚಲಿಕರ, ಕಾರ್ಯದರ್ಶಿ ಆರ್.ಎಸ್.ಹೊಳೆಪ್ಪಗೋಳ, ಪ್ರಾಚಾರ್ಯರಾದ ಪಿ.ಬಿ.ಮುನ್ಯಾಳ, ಕೆ.ವಿ.ಪಾಟೀಲ, ಆರ್.ಕೆ.ಪಾಟೀಲ, ವಕೀಲರಾದ ಕೆ.ಆರ್.ಕೋಠಿವಾಲೆ, ಡಿ.ಎಚ್.ಯಲ್ಲಟ್ಟಿ, ಸುನೀಲ ಕಾಂಬಳೆ, ಎ.ಬಿ.ಒಡೆಯರ, ಸಿ.ಎಚ್.ನಾಯಿಕ, ಈಶ್ವರ ಪತ್ತಾರ, ಮುತ್ತಪ್ಪ ಹಂಜಿ, ಡಿ.ಎಂ.ಸಾಲಿ, ಪಿ.ಆರ್.ರಾಮತೀರ್ಥ, ಸುನಿತಾ ಪಾಟೀಲ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts