More

    ಸಮಾಜ ಕಲ್ಯಾಣ ಇಲಾಖೆ ತರಬೇತಿ ಆಯ್ಕೆಗೆ 18ರಂದು ಪರೀಕ್ಷೆ

    ಚಿತ್ರದುರ್ಗ: ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಯುಪಿಎಸ್‌ಸಿ,ಕೆಎಎಸ್,ಗ್ರೂಫ್-ಸಿ, ಎಸ್ ಎಸ್‌ಸಿ,ಬ್ಯಾಂಕಿಗ್ ಹಾಗೂ ಆರ್.ಆರ್.ಬಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಇದೇ ಫೆ.18ರಂದು ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಎಸಿ ಎಂ.ಕಾರ್ತಿಕ್ ಹೇಳಿದರು.
    ಡಿಸಿ ಕಚೇರಿಯಲ್ಲಿ ಗುರುವಾರ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮುರಾರ್ಜಿ ದೇಸಾಯಿ ವಸತಿ ಶಾಲೆ,ಕಿ ತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಸೇರಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1ರವರೆಗೆ ಪ್ರವೇಶ ಪರೀಕ್ಷೆ ನಡೆಸಲಿದೆ.
    ಅಂದು ಬೆಳಗ್ಗೆ 10.30ರಿಂದ 12.30ರವರೆಗೆ ಸಮಾಜ ಕಲ್ಯಾಣ ಇಲಾಖೆ,ಯುಪಿಎಸ್‌ಸಿ,ಕೆಎಎಸ್ ಗ್ರೂಫ್ ಸಿ,ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹಾಗೂ ಮಧ್ಯಾಹ್ನ 2.30ರಿಂದ 4:30 ವರೆಗೆ ಎಸ್‌ಎಸ್‌ಸಿ ಬ್ಯಾಂಕಿಗ್ ಹಾಗೂ ಆರ್‌ಆರ್‌ಬಿ ಪ್ರವೇಶ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕಾರ್ಯಗಳಲ್ಲಿ ಲೋಪವಾಗಬಾರದು.
    ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು. ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳನ್ನು ಕೊಂಡೊಯ್ಯುವ ಮಾರ್ಗಾಧಿಕಾರಿಗಳ ತಂಡಗಳ ರಕ್ಷಣೆಗೆ ಪೊಲೀಸರನ್ನು ನೇಮಿಸಬೇಕು.
    ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು,ಕ್ಯಾಲುಕುಲೇಟರ್,ಮೊಬೈಲ್‌ಪೋನ್, ಬ್ಲೂಟೂತ್,ವೈರ್‌ಲೆಸ್‌ಸೆಟ್ ಇತ್ಯಾದಿ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
    ಪ್ರವೇಶ ಪತ್ರ ಮತ್ತು ಗುರುತಿನ ಚೀಟಿ ತೋರಿಸಿದವರಿಗೆ ಪರೀಕ್ಷಾ ಕೊಠಡಿ ಪ್ರವೇಶಿಸಲು ಅವಕಾಶ ನೀಡಬೇಕು. ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳ ಬಂಡಲ್‌ಗಳನ್ನು ಮಾರ್ಗಾಧಿಕಾರಿಗಳಿಗೆ ಹಸ್ತಾಂತರಿಸಬೇಕು.
    ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ಮಾತನಾಡಿ,ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ತಾಲೂ ಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 17 ಕೇಂದ್ರ ಗಳಿದ್ದು, 6,234 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
    ಸಮಾಜ ಕಲ್ಯಾಣ ಇಲಾಖೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಚಿತ್ರದುರ್ಗ ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ಜ ರುಗಲಿದೆ. ಬೆಳಗಿನ ಅವಧಿಗೆ 1,880 ಹಾಗೂ ಮಧ್ಯಾಹ್ನ ಅವಧಿಗೆ 1,069 ಅಭ್ಯರ್ಥಿಗಳು ಪರೀಕ್ಷೆ ಹಾಜರಾಗಲಿದ್ದಾರೆ. ಅಕ್ರಮಗಳ ತ ಡೆಗೆ ಜಾಗೃತ ದಳಗಳನ್ನು ನೇಮಿಸಲಾಗಿದೆ ಎಂದರು. ಜಿಲ್ಲಾ ಖಜಾನಾಧಿಕಾರಿ ರಮೇಶ್,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ನಾಗಭೂಷ ಣ್,ತಿಪ್ಪೇಸ್ವಾಮಿ,ಪಿಐ ಗುಡ್ಡಪ್ಪ ಮತ್ತಿತರ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts