More

    ಸಮಾಜ ತಿದ್ದಿದ ಮಹಾನ್ ಚೇತನ ಕನಕದಾಸ

    ಬೆಳಗಾವಿ: ಕನಕದಾಸರು ತಮ್ಮ ದಾಸ ಸಾಹಿತ್ಯ, ಕೀರ್ತನೆಗಳ ಮೂಲಕ ಜೀವನ ಪಾಠ ಸಾರಿದ್ದಾರೆ. ಜಾತಿ, ಮತ, ಕುಲಗಳ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ, ಸಮಾಜದ ಅಂಕುಡೊಂಕು ತಿದ್ದಿದ್ದಾರೆ ಎಂದು ಉಪನ್ಯಾಸಕ ಡಾ. ಎಚ್.ಬಿ. ಕೋಲಕಾರ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಭಕ್ತ ಕನಕದಾಸ ಹಾಗೂ ಒನಕೆ ಓಬವ್ವ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು. ಅವರ ಕೀರ್ತನೆಗಳು, ಸಾಹಿತ್ಯ ನಮಗೆ ದಾರಿದೀಪ. ಕನಕದಾಸರ ಆದರ್ಶಗಳು ಇಂದಿಗೂ ಪ್ರಸ್ತುತ ಎಂದರು.
    ಸಹಜ ಬದುಕು ಬಾಳಿದ ಕನಕದಾಸರು, ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಅನನ್ಯ ಕೊಡುಗೆ ನೀಡಿದ್ದಾರೆ. ಇತಿಹಾಸದ ಅಧ್ಯಯನ ಮಾಡಿದರೆ ಕನಕದಾಸರು ಸಮಾಜಕ್ಕೆ ಉತ್ತಮ ಸಂದೇಶ ಸಾರಿದ್ದಾರೆ ಎಂಬುದು ತಿಳಿದು ಬರುತ್ತದೆ. ಪ್ರಕೃತಿಯ ಆರಾಧನೆ ಕುರಿತು ಬಹಳ ಅಚ್ಚುಕಟ್ಟಾಗಿ ತಮ್ಮ ಸಾಹಿತ್ಯದ ಮೂಲಕ ಜಗತ್ತಿಗೆ ಪರಿಚಯಿಸಿದ್ದಾರೆ ಎಂದರು.

    ಡಾ.ವಿಜಯಲಕ್ಷ್ಮೀ ಪುಟ್ಟಿ ಅವರು ಒನಕೆ ಓಬವ್ವ ಕುರಿತು ಉಪನ್ಯಾಸ ನೀಡಿ, ರಾಜ್ಯ ಸರ್ಕಾರದ ಆದೇಶದಂತೆ ಒನಕೆ ಓಬವ್ವ ಜಯಂತಿ ಆಚರಣೆ ಮಾಡಲಾಗುತ್ತದೆ. ಚಿತ್ರದುರ್ಗ ಕೋಟೆ, ಅಲ್ಲಿನ ಬೆಟ್ಟಗುಡ್ಡ, ಪ್ರಕೃತಿ ಸೌಂದರ್ಯ ಜಗತ್ತಿಗೆ ಚಿರಪರಿಚಿತವಾಗಿದೆ. ಒನಕೆ ಓಬವ್ವನ ಕುರಿತು ನಾವು ಅನೇಕ ಚಲನಚಿತ್ರಗಳಲ್ಲಿ ನೋಡಿದ್ದೇವೆ. ಒನಕೆ ಓಬವ್ವ ಈ ನಾಡಿನ ವೀರ ಮಹಿಳೆ ಹೈದರ್ ಅಲಿಯ ನೂರಾರು ಸೈನಿಕರನ್ನು ಏಕಾಂಕಿಯಗಿ ಕೊಂದದ್ದು ಐತಿಹಾಸಿಕ ಸಾಹಸ ಎಂದರು.

    ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಬೆಳಗಾವಿ ಉಪವಿಭಾಗಾಧಿಕಾರಿ ಬಲರಾಮ ಚವ್ಹಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಕ್ಷ್ಮಣ ಬಬಲಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಕನಕ ನೌಕರರ ಸಂಘದ ಅಧ್ಯಕ್ಷ ಅಶೋಕ ಸದಲಗಿ, ಕೆ.ಎಸ್.ಆರ್ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಪ್ರೊ. ಬಿ.ಜಿ ಧಾರವಾಡ ಇದ್ದರು.

    ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಕನಕದಾಸ ಹಾಗೂ ಒನಕೆ ಓಬವ್ವ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬುಡಾ ಕಚೇರಿಯ ಕನಕದಾಸ ವೃತ್ತದಿಂದ ನಗರದ ಕುಮಾರ ಗಂಧರ್ವ ಕಲಾ ಮಂದಿರದ ವರೆಗೆ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಂಡಿದ್ದವು. ಸಂಸದೆ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ, ಜಿಪಂ ಸಿಇಒ ಎಚ್.ವಿ. ದರ್ಶನ್, ಎಸ್ಪಿ ಸಂಜೀವ ಪಾಟೀಲ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಸಿಪಿ ರವೀಂದ್ರ ಗಡಾದಿ, ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts