More

    ಸಮಾಜ ಮುಖ್ಯವಾಹಿನಿಗೆ ಬರಲಿ: ಭೋವಿ ಜಾಗೃತಿ ಸಮಾವೇಶದಲ್ಲಿ ಸಂಘದ ರಾಷ್ಟ್ರೀಯ ಅಧ್ಯಕ್ಷ ಮಾಕಳಿ ರವಿ ಹೇಳಿಕೆ

    ವಿಜಯವಾಣಿ ಸುದ್ದಿಜಾಲ ದೇವನಹಳ್ಳಿ
    ದೇಶದಲ್ಲಿ ಶ್ರಮಪಟ್ಟು ಕೆರೆ-ಕುಂಟೆ, ದೇವಾಲಯ, ವಿಧಾನಸೌಧ, ಪಾರ್ಲಿಮೆಂಟ್ ಕಟ್ಟಿದ ಭೋವಿ ಸಮಾಜದವರು ಪ್ರಜ್ಞಾವಂತರಾಗಿ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಭೋವಿ ಸಂಘದ ರಾಷ್ಟ್ರೀಯ ಅಧ್ಯಕ್ಷ ಮಾಕಳಿ ರವಿ ಹೇಳಿದರು.
    ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು ಭೋವಿ ಸಂಘ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಹಾಗೂ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.
    ಭೋವಿ ಸಮಾಜದ ಜಾಗೃತಿ ಸಮಾವೇಶಕ್ಕೆ ಶ್ರಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಪ್ರೇರಣೆಯಾಗಿದ್ದು, ಮುಂದಿನ ದಿನಗಳಲ್ಲಿ ಸಮುದಾಯದವರು ಒಗ್ಗಟ್ಟು ಪ್ರದರ್ಶನ ಮಾಡುವ ಮೂಲಕ ಸಂಘಟಿತರಾಬೇಕು ಎಂದರು.
    ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಭೋವಿ ಸಮಾಜದ ಬೇಡಿಕೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ. ಕಲ್ಲುಗಳನ್ನು ಸಾಗಿಸುವ ಟ್ರ್ಯಾಕ್ಟರ್‌ಗಳನ್ನು ಪೊಲೀಸರು ತಡೆದು, ಕಿರುಕುಳ ನೀಡುತ್ತಿದ್ದರು. ಇದಕ್ಕೆ ಕಡಿವಾಣ ಹಾಕಲಾಗಿದೆ. ಭೋವಿ ಸಮಾಜದ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು. ಭೋವಿ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿ, ಸವಲತ್ತು ನೀಡಿ ಆರ್ಥಿಕ ಸಬಲರನ್ನಾಗಿ ಮಾಡಬೇಕಿದೆ. ಜತೆಗೆ ಶರಣರ ಜಯಂತಿಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಲು ಸರ್ಕಾರ ಚಿಂತನೆ ನಡೆಸಬೇಕಿದೆ ಎಂದರು.
    ಸಮಾಜದ ಮುಖಂಡ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ದ್ಯಾವರಹಳ್ಳಿ ಶಾಂತಕುಮಾರ್ ಮಾತನಾಡಿ, ಜಿಲ್ಲಾಡಳಿತ ಭವನದ ಪಕ್ಕದಲ್ಲಿ ಅಭಿವೃದ್ಧಿಪಡಿಸುತ್ತಿರುವ ಬಡಾವಣೆಯಲ್ಲಿ ಭೋವಿ ಸಮಾಜದ ಭವನ ನಿರ್ಮಾಣಕ್ಕೆ ಉಚಿತ ನಿವೇಶನ ಕೊಡುತ್ತೇನೆ ಎಂದರು.


    ಮಾಜಿ ಶಾಸಕ ವೆಂಕಟಸ್ವಾಮಿ ಮಾತನಾಡಿ, ಪಕ್ಷಾತೀತವಾಗಿ ಕಾರ್ಯಕ್ರಮವನ್ನು ಸಂಘಟಿಸಿದ್ದು, ಜನಾಂಗದ ಸುಮಾರು 14 ಸಾವಿರ ಜನ ತಾಲೂಕಿನ 67 ಹಳ್ಳಿಗಳಲ್ಲಿ ವಾಸಿಸುತ್ತಿದ್ದು, ಎಲ್ಲರೂ ಉನ್ನತ ವ್ಯಾಸಂಗ ಮಅಡಿ ಸಮಾಜವನ್ನು ಅಭಿವೃದ್ಧಿಯತ್ತ ಕೊಂಡ್ಯೊಯ್ಯಬೇಕಿದೆ ಎಂದರು. ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಮಾಜಿ ಜಿಪಂ ಉಪಾಧ್ಯಕ್ಷೆ ಅನಂತಕುಮಾರಿ ಚಿನ್ನಪ್ಪ, ಮಂಜುನಾಥ ಫೌಂಡೇಶನ್ ಸ್ಥಾಪಕ ಮಂಜುನಾಥ್, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ಸಮಾಜಸೇವಕ ಬಂಡೆ ಮಾಲೀಕ ಜ್ಯೋತಿಪುರ ಈಶ್ವರಬಾಬು, ಭೋವಿ ಸಂಘದ ತಾಲೂಕು ಅಧ್ಯಕ್ಷ ತಮ್ಮಯ್ಯಪ್ಪ, ಪ್ರಧಾನ ಕಾರ್ಯದರ್ಶಿ ಮುರಳಿ, ಉಪಾಧ್ಯಕ್ಷ ಗೋಪಾಲ್, ಮುನಿರಾಜು, ಕುಂದಾಣ ಗ್ರಾಪಂ ಅಧ್ಯಕ್ಷ ನಾರಾಯಣಸ್ವಾಮಿ, ಕೊಯಿರ ಗ್ರಾಪಂ ಉಪಾಧ್ಯಕ್ಷೆ ರಮ್ಯಾ ಶ್ರೀನಿವಾಸ್, ಗ್ರಾಪಂ ಸದಸ್ಯರಾದ ವೆಂಕಟಸ್ವಾಮಿ ಇದ್ದರು.


    ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಜಯಂತಿಗಳು ನಮ್ಮನ್ನು ಜಾಗೃತರನ್ನಾಗಿ ಕಾರ್ಯಕ್ರಮಗಳಾಗಿದ್ದು, ಸಮಸಮಾಜ ನಿರ್ಮಾಣವಾದರೆ, ಮಾನಸಿಕ ಅಸ್ಪೃಶ್ಯತೆ ನಿವಾರಣೆ ಸಾಧ್ಯ. ಭೋವಿ ಸಮಾಜದವರು ಬಂಡೆ ಒಡೆದು ಬದುಕುತ್ತಾರೆ. ತಲೆ ಒಡೆಯುವವರಲ್ಲ. ನಮ್ಮ ಸಮಾಜದವರು ಶ್ರಮಜೀವಿಗಳಾಗಿದ್ದು, ಕುಡಿತದಿಂದ ದೂರವಿದ್ದು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿದರೆ, ಧಾರ್ಮಿಕ, ಆರ್ಥಿಕ, ರಾಜಕೀಯ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ. ಸಮಾಜದವರು ಮತ್ತೊಮ್ಮೆ ಈ ಭಾಗದ ಶಾಸಕರಾದರೆ ಸಮಾಜ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts