More

    ಸಮಾಜ ಸುಧಾರಣೆಗೆ ವೇಮನರ ಕೊಡುಗೆ ಅಪಾರ

    ಧಾರವಾಡ: ಮಹಾಯೋಗಿ ಶ್ರೀ ವೇಮನರು ಒಂದೇ ಕುಲ, ಸಮಾಜಕ್ಕೆ ಸೀಮಿತವಾಗಿರದೆ ಸಮಾಜದ ಸುಧಾರಣೆಗಾಗಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಹಸೀಲ್ದಾರ್ ಸಂತೋಷಕುಮಾರ ಬಿರಾದಾರ ಹೇಳಿದರು.

    ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ರೆಡ್ಡಿ ಕಾಲನಿಯ ಸರಸ್ವತಿಪುರದ ಶ್ರೀ ವೆಂಕಟೇಶ್ವರ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ಜರುಗಿದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ರಾಜಮನೆತನದಲ್ಲಿ ಜನಿಸಿದ ವೇಮನರು ಆರಂಭದಲ್ಲಿ ಕೆಲ ದುಶ್ಚಟಗಳ ದಾಸರಾಗಿದ್ದರು. ನಂತರದ ದಿನಗಳಲ್ಲಿ ಅತ್ತಿಗೆ ಹೇಮರಡ್ಡಿ ಮಲ್ಲಮ್ಮ ಹಾಗೂ ಇತರ ದಾರ್ಶನಿಕರ ಪ್ರಭಾವದಿಂದ ಮಹಾನ್​ಯೊಗಿಯಾಗಿ, ತತ್ವಜ್ಞಾನಿಯಾಗಿ ಬದಲಾದರು. ಜಗತ್ತಿನಲ್ಲಿ ಜನಿಸಿದ ಪ್ರತಿಯೊಬ್ಬ ಮನುಷ್ಯರಲ್ಲಿ ಜಗತ್ತನ್ನು ಆಳುವ ಶಕ್ತಿ ಇರುತ್ತದೆ. ಆ ಶಕ್ತಿಯನ್ನು ಸದುಪಯೋಗ ಮಾಡಿಕೊಂಡರೆ ಸಾಧನೆ ಸಾಧ್ಯ. ವೇಮನರ ಜೀವನಶೈಲಿ ಅರಿತವರು ಜೀವನದಲ್ಲಿ ಏನಾದರೂ ಸಾಧನೆ ಮಾಡಬಹುದು ಎಂದರು.

    ಶಾರದಾ ಪದವಿಪೂರ್ವ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ರಾಮಚಂದ್ರ ಪಾಟೀಲ, ‘ಮಹಾಯೋಗಿ ವೇಮನರ ಸಾಮಾಜಿಕ ಕೊಡುಗೆ’ ವಿಷಯ ಕುರಿತು ಉಪನ್ಯಾಸ ನೀಡಿದರು.

    ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕಿ ಡಾ. ರೇಣುಕಾ ಅಮಲಝುರಿ ವಿಶೇಷ ಉಪನ್ಯಾಸ ನೀಡಿದರು. ಹಿರಿಯ ವಕೀಲ ವಿ.ಡಿ. ಕಾಮರೆಡ್ಡಿ, ಹಿರಿಯ ನ್ಯಾಯವಾದಿ ಕೆ.ಎಲ್. ಪಾಟೀಲ, ಪಾಲಿಕೆ ಮಾಜಿ ಸದಸ್ಯ ರಘು ಲಕ್ಕಣ್ಣವರ, ಕರ್ನಾಟಕ ವಿಶ್ವವಿದ್ಯಾಲಯದ ಮಹಾಯೋಗಿ ವೇಮನ ಅಧ್ಯಯನ ಪೀಠದ ಸಂಯೋಜಕ ಡಾ. ಎಚ್.ಬಿ. ನೀಲಗುಂದ, ರಡ್ಡಿ ಸಮಾಜದ ಮುಖಂಡ ಕೆ.ವಿ. ತಿಮ್ಮಾಪುರ, ಇತರರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಸ್ವಾಗತಿಸಿದರು. ಅನಸೂಯಾ ನೀಲಗುಂದ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts