More

    ಸಮಾದಾಪುರದಲ್ಲಿ ದಂತ ಉಚಿತ ತಪಾಸಣೆ ಶಿಬಿರ


    ಹಂಪಾಪುರ: ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ದಂತ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರವನ್ನು ಏರ್ಪಡಿಸಲಾಗಿತ್ತು.

    ಗ್ರಾಮ ಪಂಚಾಯತಿ ಅಧ್ಯಕ್ಷ ದಿನೇಶ್ ಉದ್ಘಾಟಿಸಿದರು. ದಂತ ತಜ್ಞ ಡಾ.ಸಮೀವುಲಾ ಶರೀಫ್ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ದಂತ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕಿದೆ. ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದಡಿ ಲಭ್ಯವಿರುವ ಸವಲತ್ತುಗಳ ಬಗ್ಗೆ ತಿಳಿಸಿಕೊಡಬೇಕು. ಬಾಯಿ ಆರೋಗ್ಯ ನಮ್ಮ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದಂತೆ ಎಂದರು.

    ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಉಪಕೆಂದ್ರ, ಗ್ರಾಮ ಮಟ್ಟದಲ್ಲಿ ದಂತಭಾಗ್ಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

    ಗ್ರಾಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಚಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಕಲಾ, ದಂತ ವೈದ್ಯ ಡಾ.ನಾಗೇಶ್‌ಕುಮಾರ್, ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಮಹೇಶ್, ಗ್ರಾಮದ ಮುಖಂಡ ಮಂಚಯ್ಯ, ಆರೋಗ್ಯ ಇಲಾಖೆ ಸಿಬ್ಬಂದಿ ರವಿರಾಜ್, ಲಕ್ಷ್ಮೀಭಟ್, ಪ್ರದೀಪ, ಶೀಲಾ,ದೊರೆ, ಶಶಿರೇಖಾ, ಜಯಂತಿ, ವೀಣಾ, ಪ್ರತಾಪ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಶಾಲೆಯ ಮಕ್ಕಳು, ಸಾರ್ವಜನಿಕರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts