More

    ಸಮೀಕ್ಷೆ ಕಾರ್ಯ ಶೀಘ್ರ ಪೂರ್ಣಗೊಳಿಸಿ

    ಗದಗ: ಮಳೆ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯಲ್ಲಿ ಹಾನಿಗೊಳಗಾದ ಮನೆ ಹಾಗೂ ಕೃಷಿ ಜಮೀನುಗಳ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಿ, ತ್ವರಿತವಾಗಿ ಪರಿಹಾರ ಒದಗಿಸಲು ಅಗತ್ಯ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು, ಆರೋಗ್ಯ ಇಲಾಖಾಧಿಕಾರಿಗಳ ಜತೆಗೆ ಜರುಗಿದ ವಿಡಿಯೋ ಕಾನ್ಪರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ನದಿ ಪಾತ್ರಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ಮಳೆ ಹೆಚ್ಚಾಗುವುದರಿಂದ ನದಿ ಪಾತ್ರದ ಗ್ರಾಮಗಳು ಪ್ರತಿವರ್ಷ ಪ್ರವಾಹಕ್ಕೆ ಒಳಗಾಗುತ್ತಿದ್ದು ಇದರಿಂದಾಗುವ ಆಸ್ತಿ, ಜನ, ಜಾನುವಾರು ಹಾಗೂ ಬೆಳೆ ಹಾನಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರವಾಹ ಭೀತಿ ಎದುರಿಸುವ ಗ್ರಾಮಗಳನ್ನು ಸ್ಥಳಾಂತರಿಸಲು ಹಾಗೂ ಈಗಾಗಲೇ ನಿರ್ವಿುಸಲಾದ ಮನೆಯ ಹಕ್ಕು ಪತ್ರಗಳ ವಿತರಣೆಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದರು. ಪ್ರವಾಹ ಹಾಗೂ ಅಧಿಕ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆ ಹಾಗೂ ಸೇತುವೆಗಳ ದುರಸ್ತಿ ಕೈಗೊಂಡು ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಮಳೆ ನೀರು ಸರಾಗವಾಗಿ ಸಾಗಲು ಅನುವಾಗುವಂತೆ ಚರಂಡಿ, ಕಾಲುವೆಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆಯಾಗುತ್ತಿದೆ. ರಸಗೊಬ್ಬರದ ಅನಧಿಕೃತ ದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸುವವರನ್ನು ಪತ್ತೆ ಮಾಡಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲು ಕೃಷಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರೈತರು ಅಗತ್ಯಕ್ಕೆ ಅನುಗುಣವಾಗಿ ಹಾಗೂ ಮಿತವಾಗಿ ಯೂರಿಯಾ ರಸಗೊಬ್ಬರ ಬಳಕೆ ಮಾಡುವಂತೆ ಜಾಗೃತಿ ಮೂಡಿಸಲು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.

    ಕರೊನಾ ಸೋಂಕು ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಪೌರ ಕಾರ್ವಿುಕರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಇತರೆ ಇಲಾಖೆ ಸಿಬ್ಬಂದಿಗೆ ಸುರಕ್ಷತಾ ಪರಿಕರಗಳನ್ನು ಒದಗಿಸಲು ಎಲ್ಲ ತಹಸೀಲ್ದಾರರಿಗೆ ಸೂಚನೆ ನೀಡಿದರು. ಹೋಂ ಕ್ವಾರಂಟೈನ್​ನಲ್ಲಿ ಇರುವವರ ಮನೆಗೆ ಆರೋಗ್ಯಾಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಅವರ ಆರೋಗ್ಯದ ಮೇಲೆ ನಿಗಾವಹಿಸಬೇಕು. ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದರೆ ಹೆಚ್ಚಿನ ಚಿಕಿತ್ಸೆಗಾಗಿ ಕೂಡಲೇ ತಾಲೂಕು ಆಸ್ಪತ್ರೆಗಳಿಗೆ ದಾಖಲಿಸಲು ಕ್ರಮ ಜರುಗಿಸಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಎಸ್.ಎನ್. ರುದ್ರೇಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ ಬಸರಿಗಿಡದ ಹಾಜರಿದ್ದರು.

    ಬೆಡ್ ಹೆಚ್ಚಿಸಲು ಸೂಚನೆ
    ಜಿಲ್ಲೆಯ ನಿಗದಿತ ಕೋವಿಡ್ ಆಸ್ಪತ್ರೆ ಜಿಮ್್ಸ ನಲ್ಲಿ ಈಗಿರುವ ಆಕ್ಸಿಜನ್ ಹಾಸಿಗೆಗಳ ಸಾಮರ್ಥ್ಯಕ್ಕಿಂತ ಹೆಚ್ಚುವರಿಯಾಗಿ 100 ಹಾಸಿಗೆಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಅದೇ ರೀತಿ ತಾಲೂಕು ಆಸ್ಪತ್ರೆಗಳಲ್ಲಿ 50 ಆಕ್ಸಿಜನ್ ಬೆಡ್​ಗಳ ವ್ಯವಸ್ಥೆ ಮಾಡಿಕೊಳ್ಳುವ ಮೂಲಕ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವತ್ತರಾಗಬೇಕೆಂದು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts