More

    ಸಮ್ಮೇಳನದಲ್ಲಿ ಸೈನಿಕರಿಗೆ ಶುಲ್ಕ ರಹಿತ ನೋಂದಣಿ

    ಹಾವೇರಿ: ನಗರದಲ್ಲಿ ಜನವರಿ 6ರಿಂದ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಸೈನಿಕರಿಗೆ ಶುಲ್ಕ ರಹಿತ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಸಮ್ಮೇಳನದಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಹೇಳಿದರು.
    86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ಅಂಗವಾಗಿ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಸಾಪ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರತಿನಿಧಿಗಳ ನೋಂದಣಿಗಾಗಿ ಆ್ಯಪ್ ರಚಿಸಲಾಗಿದೆ. ಅದರ ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ. ನೋಂದಾಯಿತ ಪ್ರತಿನಿಧಿಗಳಿಗೆ ಮಾತ್ರ ವಸತಿ ಸೌಕರ್ಯ ಒದಗಿಸಲಾಗುವುದು. ಉಳಿದಂತೆ ಸಮ್ಮೇಳನದಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶವಿದ್ದು, ಉಚಿತ ಊಟೋಪಚಾರದ ವ್ಯವಸ್ಥೆ ಮಾಡಲಾಗುವುದು ಎಂದರು.
    ಜಿಪಂ ಸಿಇಒ ಮಹಮ್ಮದ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಪಂ ಉಪ ಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ತಾಲೂಕು ಅಧ್ಯಕ್ಷ ವೈ.ಬಿ.ಆಲದಕಟ್ಟಿ, ಕೇಂದ್ರ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts