More

    ಸರ್ಕಾರದಿಂದ ದೇಶಿ ಕ್ರೀಡೆಗಳಿಗೆ ಪೋ›ತ್ಸಾಹ

    ನರಗುಂದ: ಬದಲಾಗುತ್ತಿರುವ ಭಾರತದಲ್ಲಿ ದೇಶಿ ಕ್ರೀಡೆಗಳಿಗೆ ವಿಶೇಷ ಆದ್ಯತೆ, ಪೋ›ತ್ಸಾಹ ನೀಡಲಾಗುತ್ತಿದೆ. ಇದರಿಂದಾಗಿ ಕ್ರೀಡಾಪಟುಗಳು ಒಲಿಂಪಿಕ್ಸ್, ಖೇಲೋ ಇಂಡಿಯಾ ಸ್ಪರ್ಧೆಗಳಲ್ಲಿ ನಿರೀಕ್ಷಿತ ಸಾಧನೆ ಮಾಡುವಂತಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
    ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನರಗುಂದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜ್​ಗಳ ಕ್ರೀಡಾಕೂಟ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
    ದೇಹ ಸದೃಢವಾಗಿದ್ದರೆ ಏನು ಬೇಕಾದರೂ ಸಾಧಿಸಬಹುದು. ದೈಹಿಕ ಶಿಕ್ಷಣ ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕು. ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಮೀಸಲಾತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಛಲ, ನಿರ್ದಿಷ್ಟ ಗುರಿ, ನಿರಂತರ ಪರಿಶ್ರಮದಿಂದ ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆಗೈಯುವ ಮೂಲಕ ದೇಶದ ಕೀರ್ತಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಬೇಕು ಎಂದರು.
    ಎಂ.ಎಸ್. ಕರಿಗೌಡ್ರ ಮಾತನಾಡಿ, ಗ್ರಾಮೀಣ ಪ್ರತಿಭೆಗಳ ಹಿತದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶಿ ಕ್ರೀಡೆಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡಿದ್ದಾರೆ. ಪ್ರತಿಯೊಂದು ರಂಗಗಳಲ್ಲಿಯೂ ಸಮಾನತೆ ಕಲ್ಪಿಸಿಕೊಟ್ಟಿದ್ದರಿಂದ ಸಾಕಷ್ಟು ಕ್ರೀಡಾ ಸ್ಪರ್ಧಾಳುಗಳು ವಿಶೇಷ ಸಾಧನೆಗೈದಿದ್ದಾರೆ. ಸೋತವರು ನಿರಾಸೆ ಹೊಂದುವ ಬದಲು ಆತ್ಮ ಸ್ಥೈರ್ಯದಿಂದ ನಿಜ ಜೀವನದಲ್ಲಿ ಗೆಲುವು ಸಾಧಿಸಬೇಕು ಎಂದರು.
    ಹಿರಿಯ ವಕೀಲ ಬಿ.ವಿ. ಸೋಮಾಪೂರ ಮಾತನಾಡಿದರು. ಪುರಸಭೆ ಅಧ್ಯಕ್ಷೆ ರಾಜೇಶ್ವರಿ ಹವಾಲ್ದಾರ, ಉಪಾಧ್ಯಕ್ಷೆ ಅನ್ನಪೂರ್ಣಾ ಯಲಿಗಾರ, ಗುರಪ್ಪ ಆದೆಪ್ಪನವರ, ಮಲ್ಲಪ್ಪ ಮೇಟಿ, ಆರ್.ಎಸ್. ಪವಾರ, ಪಿ.ವಿ. ಬೆನ್ನೂರ, ವಿಶ್ವನಾಥ ಗುಡಿಸಾಗರ, ಬಿ.ಬಿ. ಐನಾಪೂರ, ವೈ.ಡಿ. ಮಾಮನಿ, ಎಂ.ಎಂ. ಕಿಲ್ಲೇದಾರ, ಎನ್.ಆರ್. ನೀಡಗುಂದಿ, ಬಿ.ಆರ್. ಪಾಟೀಲ, ವಿವಿಧ ಪದವಿ ಪೂರ್ವ ಕಾಲೇಜ್​ಗಳ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts