More

    ಸರ್ಕಾರದ ಯೋಜನೆ ರೈತರಿಗೆ ತಲುಪಿಸಿ

    ನರಗುಂದ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ, ರೈತಪರ ಯೋಜನೆಗಳನ್ನು ರೈತ ಮೋರ್ಚಾ ಕಾರ್ಯಕರ್ತರು ಪ್ರತಿಯೊಂದು ಮನೆಗೆ ತಲುಪಿಸಬೇಕು ಎಂದು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಜಣ್ಣ ಕುಲಕರ್ಣಿ ಹೇಳಿದರು.

    ಪಟ್ಟಣದ ದಂಡಾಪೂರ ಬಡಾವಣೆ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನರಗುಂದ ಮಂಡಲದ ರೈತ ಮೋರ್ಚಾ ಕಾರ್ಯಕಾರಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ರೈತರ ಹಿತಾಸಕ್ತಿ ಆಧರಿಸಿ ನೂತನ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ರೈತರ ಆರ್ಥಿಕತೆಯಲ್ಲಿ ಬದಲಾವಣೆ ತರಲು ಸಾಕಷ್ಟು ಪ್ರಯತ್ನ ನಡೆಸಿದೆ. 2022ರ ವೇಳೆಗೆ ಪ್ರತಿ ರೈತನ ಆದಾಯ ದ್ವಿಗುಣಗೊಳಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

    ನರಗುಂದ ಮಂಡಲ ರೈತಮೋರ್ಚಾ ಅಧ್ಯಕ್ಷ ಮಲ್ಲಪ್ಪ ಪೂಜಾರ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು. ಅವುಗಳ ಸದುಪಯೋಗ, ಬೆಳೆಹಾನಿ, ಬೆಳೆ ಪರಿಹಾರ ಸೇರಿದಂತೆ ಮುಂತಾದ ಅಂಶಗಳ ಬಗ್ಗೆ ರ್ಚಚಿಸಿ ಗ್ರಾಮ ಮಟ್ಟದಲ್ಲಿರುವ ಪ್ರತಿಯೊಬ್ಬ ರೈತನಿಗೂ ಎಲ್ಲ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಿ, ಅವುಗಳ ಉಪಯೋಗವಾಗುವಂತೆ ನೋಡಿಕೊಳ್ಳುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದರು.

    ಜಿಲ್ಲಾ ರೈತಮೋರ್ಚಾ ಉಪಾಧ್ಯಕ್ಷ ಶಶಿಧರಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮೆಣಸಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಈರಣ್ಣ ಹೊಂಗಲ, ಕಿರಣ ಮುಧೋಳೆ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೇಶ ಹೂಗಾರ, ನಾಗನಗೌಡ ನಾಗನಗೌಡ್ರ, ಕಾರ್ತಿಕ ಚೌಧರಿ, ಮುತ್ತಣ್ಣ ಲಿಂಗಧಾಳ, ಅಶೋಕ ಜ್ಞಾನೋಪಂಥ, ಶಂಕರಗೌಡ ನಡಮನಿ, ಗೋವಿಂದರಡ್ಡಿ ನೀಲರಡ್ಡಿ, ಶಿವಯ್ಯ ಭಿಕ್ಷಾವತಿಮಠ, ರುದ್ರಗೌಡ ಭರಮಗೌಡ್ರ, ಜಡಿಯಪ್ಪಗೌಡ ಚನ್ನಪ್ಪಗೌಡ್ರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts