More

    ಸರ್ಕಾರದ ಯೋಜನೆ ಸದುಪಯೋಗವಾಗಲಿ

    ಡಂಬಳ: ಕಂದಾಯ ಹಾಗೂ ಪಿಂಚಣಿ ಅದಾಲತ್ ಮಹತ್ವದ ಯೋಜನೆಯಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.

    ಡಂಬಳದ ತೋಂಟದಾರ್ಯ ಕಲಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಬಡವರು, ನಿರ್ಗತಿಕರು, ವೃದ್ಧರು, ಅಂಗವಿಕಲರು ಇತರೆ ಅರ್ಹ ಪಲಾನುಭವಿಗಳು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಬಾರದು. ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ನೀಡಿ ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು’ ಎಂದರು.

    ತಹಸೀಲ್ದಾರ್ ಆಶಪ್ಪ ಪೂಜಾರ ಪ್ರಾಸ್ತಾವಿಕವಾಗಿ ಮಾತನಾಡಿ, ‘ತಾಲೂಕು ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಕೆಲವು ಫಲಾನುಭವಿಗಳ ಮನೆಗೆ ತೆರಳಿ ಅಗತ್ಯ ದಾಖಲೆ ಪಡೆದು ತಾವೇ ಅರ್ಜಿ ಭರ್ತಿಮಾಡಿ ಆದೇಶ ಪ್ರತಿ ನೀಡಿದ್ದಾರೆ. ಸರ್ಕಾರದ ಯೋಜನೆಗಳಿಂದ ಯಾರೂ ವಂಚಿತರಾಗಬಾರದು’ ಎಂದರು.

    ಈ ವೇಳೆ ಅಧಿಕಾರಿಗಳ ಎದುರು ಅಳಲು ತೋಡಿಕೊಂಡ ಕೆಲವು ಫಲಾನುಭವಿಗಳು, ಆರೇಳು ತಿಂಗಳಿನಿಂದ ಮಾಸಾಶನ ಬಂದಿಲ್ಲ. ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಕಚೇರಿಗೆ ಅಲೆದಾಡಿ ಸಾಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳ ಸಾರ್ವಜನಿಕರಿಂದ 142 ಅರ್ಜಿಗಳು ಬಂದಿದ್ದು ಸ್ಥಳದಲ್ಲಿ 60 ಪಲಾನುಭವಿಗಳ ಆದೇಶ ಪ್ರತಿ ನೀಡಲಾಯಿತು. ಉಳಿದ ಪಲಾನುಭವಿಗಳ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಆದೇಶ ಪ್ರತಿ ವಿತರಿಸಲಾಗುತ್ತದೆ ಎಂದು ಉಪ ತಹಸೀಲ್ದಾರ್ ಸಿ.ಕೆ. ಬಳಟೂಗಿ, ಕಂದಾಯ ನಿರೀಕ್ಷಕ ಎಂ.ಎ. ನದಾಫ್ ತಿಳಿಸಿದರು.

    ಪಿಡಿಒ ಎಸ್.ಕೆ. ಕವಡೆಲೆ, ಡಂಬಳ ವಲಯದ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಕೆಇಬಿ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts