More

    ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಅವಿರತಶ್ರಮ: ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ

    ಶಿಕಾರಿಪುರ: ಹಸಿವು ಮುಕ್ತ ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ಕನಸು, ಅದು ನನಸಾಗುತ್ತಿದೆ. ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
    ಸೋಮವಾರ ತಾಲೂಕಿನ ದೊಡ್ಡ ಜೋಗಿಹಳ್ಳಿ ಗ್ರಾಮದಲ್ಲಿ ಸರ್ಕಾರಿ ನ್ಯಾಯಬೆಲೆ ಅಂಗಡಿ ಉದ್ಘಾಟಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರ, ಹಿಂದುಳಿದವರ, ಉಪೇಕ್ಷಿತರ ಪರವಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ. ನಾವು ಸಮರ್ಥವಾಗಿ ಆ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುವಂತೆ ಮಾಡುತ್ತಿದ್ದೇವೆ. ಸರ್ಕಾರದ ಸವಲತ್ತುಗಳನ್ನು ನಾವೆಲ್ಲರೂ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
    ಜಗತ್ತಿನ ಶ್ರೇಷ್ಠ ವಚನಗಾರ್ತಿಯಾದ ಶಿವಶರಣೆ ಅಕ್ಕಮಹಾದೇವಿ ಅವರ ಜನ್ಮಸ್ಥಳ ಉಡುತಡಿಯನ್ನು 50 ಕೋಟಿ ರೂ. ವೆಚ್ಚದಲ್ಲಿ ದೆಹಲಿಯ ಅಕ್ಷರಧಾಮದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಮಹಾಸಂತ ಸೇವಾಲಾಲ್, ಮಹಾತಾಯಿ ಮರಿಯಮ್ಮ ಅವರ ಜನ್ಮಸ್ಥಳವನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯದಂತೆ ಬಿ.ಎಸ್. ಯಡಿಯೂರಪ್ಪ ಅವರು ಆಡಳಿತ ನಡೆಸಿದರು. ಕರೊನಾ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಜಾರಿಗೆ ತಂದಿದ್ದು, ಇಂದು ದೇಶದ ಹಳ್ಳಿ ಹಳ್ಳಿಗೂ ಆ ಯೋಜನೆ ತಲುಪಿದೆ ಎಂದು ಹೇಳಿದರು.
    ಶಿವಮೊಗ್ಗ ಜಿಲ್ಲೆಯ 35 ತಾಂಡಾ ಮತ್ತು ಶಿಕಾರಿಪುರ ತಾಲೂಕಿನ 9 ತಾಂಡಾದಲ್ಲಿ ನ್ಯಾಯಬೆಲೆ ಅಂಗಡಿಯ ಉಪಕೇಂದ್ರ ಜನತೆಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
    ಯಡಿಯೂರಪ್ಪನವರು ನನಗೆ ರೋಲ್ ಮಾಡಲ್. ಅವರ ಜನಪರ ಹೋರಾಟ, ಸಾಮಾಜಿಕ ಕಳಕಳಿ, ನಮಗೆ ಸದಾ ಮಾದರಿಯಾಗಿದೆ. ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ತಾಲೂಕನ್ನು ಮಾದರಿ ತಾಲೂಕು ಮಾಡುವ ನಿಟ್ಟಿನಲ್ಲಿ ಯಡಿಯೂರಪ್ಪನವರು ಅಧಿಕಾರದಲ್ಲಿದ್ದಾಗ ಸಾಕಷ್ಟು ಅನುದಾನ ನೀಡಿದ್ದಾರೆ. ಅವರ ಆಶಯದಂತೆ ಅಭಿವೃದ್ಧಿ ಪಥದಲ್ಲಿ ತಾಲೂಕು ರಾಜ್ಯದಲ್ಲಿ ಮುಂಚೂಣಿಯಲ್ಲಿದೆ ಎಂದು ಹೇಳಿದರು .

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts